ನ್ಯೂಸ್

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

ಎಚ್.ಡಿ.ಕೋಟೆ: ಒಂದು ತಿಂಗಳಿಂದ ಕುಡಿಯುವ ನೀರು ಇಲ್ಲದೆ ಪರದಾಡುವಂತಾಗಿದೆ ಎಂದು ಆರೋಪಿಸಿ ಪುರಸಭೆ ಸದಸ್ಯರ ನೇತೃತ್ವದಲ್ಲಿ ಪಟ್ಟಣದ ನಿವಾಸಿಗಳು ಬುಧವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಮಿಲ್ ನಾಗರಾಜು ನೇತೃತ್ವದಲ್ಲಿ ಪುರಸಭಾ ಮುಂಭಾಗ 8 ಮತ್ತು 10ನೇ ವಾರ್ಡ್‌ನ ಮಹಿಳೆಯರು ಪ್ರತಿಭಟನೆ ನಡೆಸಿ, ಕುಡಿಯುವ ನೀರು ಸಿಗದೆ ಪರದಾಟ ನಡೆಸುತ್ತಿದ್ದರು ಕೂಡ ಸಂಬಂಧಿಸಿದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆ ಕೇಳದೆ ನಿರ್ಲಕ್ಷಿಸಿದ್ದಾರೆ. ಇದರಿಂದ ನಮಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿದೆ ಎಂದು ದೂರಿದರು.


ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಪ್ರತಿಭಟನಾಕಾರರ ಮನವೊಲಿಸಿ ಎರಡು-ಮೂರು ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಕರಿಯ, ಮಹಾದೇವಮ್ಮ, ಶಾರದಾ, ತಿಮ್ಮಮ್ಮ, ನವೀನ, ಪ್ರಸಾದ್ ಇತರರಿದ್ದರು.