ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಕುದಿಸಿ ಆರಿಸಿದ ನೀರು ಕುಡಿಯಬೇಕು. ಬಿಸಿಯಾದ ಊಟ, ಶುದ್ಧ ಆಹಾರ ಸೇವಿಸಬೇಕು ಎಂದು ಹಿರಿಯ ತಜ್ಞ ವೈದ್ಯ ಡಾ.ಎಸ್.ಪಿ.ಯೋಗಣ್ಣ ಸಲಹೆ ನೀಡಿದ್ದಾರೆ.
ಹೋಟೆಲ್ಗಳಲ್ಲಿ ಶುದ್ಧ ಆಹಾರ ಮತ್ತು ಕುಡಿಯಲು ಬಿಸಿನೀರು ನೀಡಬೇಕು. ತ್ಯಾಜ್ಯ ವಸ್ತುಗಳನ್ನು ಜನವಸತಿ ಪ್ರದೇಶದ ಹೊರಗಡೆ, ನಿಗದಿತ ಸ್ಥಳದಲ್ಲಿ ಹಾಕಬೇಕು. ಗ್ರಾಮ/ಬಡಾವಣೆ, ಮನೆಗಳ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಾಂತಿ, ಭೇದಿ, ಜ್ವರ ಸೇರಿದಂತೆ ಯಾವುದೇ ಸಮಸ್ಯೆಯಾದರೂ ತಕ್ಷಣ ವೈದ್ಯರ ಬಳಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು. ವೈದ್ಯರ ನಿರ್ದೇಶನದ ಪ್ರಕಾರ ಔಷಧ ಹಾಗೂ ಪೌಷ್ಟಿಕಾಂಶದಿಂದ ಕೂಡಿದ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ.