ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು, ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು, ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 06 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ದೂ.ಸಂ: 9505894247, 8970476050, 9591514154, 9686248369, 8970446644 ನ್ನು ಸಂಪರ್ಕಿಸಬಹುದು ಎಂದು ಸೊಣ್ಣಹಳ್ಳಿಪುರದ ಮೈಕ್ರೋ ಫೈನಾನ್ಸ್ನ ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.