ನ್ಯೂಸ್

ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಸ್ಥಳಾಂತರ

ಅಪಘಾತಕ್ಕೆ ಇಡಾಗಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟಿ ಯಾಲದಿಂದ ಬೆಂಗಳೂರಿಗೆ ಏರ್ ಆಂಬುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿದೆ.

ಈಗ ಸದ್ಯ ಬೆಂಗಳೂರಿನ ಎಚ್‌ಎಎಲ್ ಪಕ್ಕದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇವರ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತೇವೆಂದು ಭರವಸೆ ನೀಡಿದ್ದಾರೆ.

ಇತ್ತೀಚೆಗೆ ಕುರುಬೂರು ಶಾಂತಕುಮಾರ್ ಕಾರಿನಲ್ಲಿ ಕೃಷಿ ಬೆಳೆಗಳಿಗೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿ ಸಂಬಂಧ ಕೇಂದ್ರ ಸರ್ಕಾರ ಕರೆದಿದ ಸಭೆಯಲ್ಲಿ ಭಾಗಿಯಾಗಲು ಹೋಗುವಾಗ ಪಂಜಾಬಿನ ಪಾಟಿಯಾಲದ ಬಳಿ ಕಾರು ಅಪಘಾತವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಅವರನ್ನು ಪಾಟಿಯಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದು ಚಿಕಿತ್ಸೆ ಗಂಭೀರತೆಯನ್ನು ಹರಿತು ರೈತ ಮುಖಂಡರಿಗೆ ಹೆಚ್ಚಿನ ಚಿಕಿತ್ಸೆ ಕೊಡಸಬೇಕೆಂದು ರಾಜ್ಯ ಸರ್ಕಾರ ಭಾನುವಾರ ಬೆಳಗ್ಗೆ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.