ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಬ್ಯಾನರ್‌ನಡಿ ಎ.ಕೆ.ಸಂತೋಷ್ ಕುಮಾರ್ ಹಾಗೂ ವಿದ್ಯಾ ನಿರ್ಮಾಣ ಮಾಡಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಲನಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಾಯಕ ನಟ ಮಡೆನೂರು ಮನು ತಿಳಿಸಿದರು.
ಕೆ.ರಾಮನಾರಾಯಣ್ ಚಿತ್ರವನ್ನು ನಿರ್ದೇಶಿಸಿದ್ದು, ಯೋಗರಾಜ್ ಭಟ್ ಹಾಗೂ ಇಸ್ಲಾಂಮುದ್ದೀನ್ ಕಥೆ ಬರೆದಿದ್ದಾರೆ. ಮನು.ಬಿ.ಕೆ ಛಾಯಾಗ್ರಹಣ ಹಾಗೂ ಮನೋಮೂರ್ತಿ ಸಂಗೀತ ಚಿತ್ರಕ್ಕೆ ಹೆಚ್ಚಿನ ಮೆರುಗು ನೀಡಿದೆ. ಸಿನಿಮಾ ಉತ್ತಮವಾಗಿ ಮೂಡಿಬಂದಿದೆ. ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಥಿಯೇಟರ್‌ಗೆ ಬಂದು ಸಿನಿಮಾ ನೋಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಚಲನಚಿತ್ರದ ನಟರಾದ ಅಕ್ಷಯ್, ಸುಧೀರ್ ಕುಮಾರ್ ಇದ್ದರು.