ಮೈಸೂರು: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಸೋಮವಾರ ನಗರದ ಕೆ.ಆರ್.ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಿದರು.
ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ತಿಳಿಸಿದರು. ನಂತರ ವಾರ್ಡ್‌ಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.