ನ್ಯೂಸ್

ಕೆ.ಎಂ.ದೊಡ್ಡಿಯಲ್ಲಿ ಸಂಘಟನೆಗಳ ಪ್ರತಿಭಟನೆ

ಕೆ.ಎಂ.ದೊಡ್ಡಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಹಾಲು ಖರೀದಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆ್ರಗಹಿಸಿ ಸೋಮವಾರ ರೈತ ಸಂಘ ಕರೆ ನೀಡಿದ್ದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದವು.


ಪ್ರಗತಿಪರ ಸಂಘಟನೆಗಳು ಮುಖಂಡರು ವಿಶ್ವೇಶ್ವರಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಮಂಡ್ಯ ನಗರದಲ್ಲಿ ನಡೆಯುತ್ತಿರುವ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದರು.


ಜಿಪಂ ಮಾಜಿ ಸದಸ್ಯ ಅಣ್ಣೂರು ರಾಜೀವ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡದೆ ರೈತರನ್ನು ಕಡೆಗಣಿಸಿದೆ. ಶೀಘ್ರ ಬೆಲೆ ನಿಗದಿ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


ರೈತ ಸಂಘದ ಮುಖಂಡ ಅಣ್ಣೂರು ಮಹೇಂದ್ರ ಮಾತನಾಡಿ, ಕೂಡಲೇ ಸರ್ಕಾರ ಕಬ್ಬು, ಹಾಲಿಗೆ ಸೂಕ್ತ ದರ ನಿಗದಿ ಮಾಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ವರ್ತಕರ ಸಂಘದ ಅಧ್ಯಕ್ಷ ಕೆಂಪೇಗೌಡ, ಗ್ರಾಪಂ ಅಧ್ಯಕ ವಕ್ರತುಂಡ ವೆಂಕಟೇಶ್, ನಾಗಮಣಿ ಮಹೇಂದ್ರ, ಮಾಜಿ ಅಧ್ಯಕ್ಷ ಕ್ಯಾತಘಟ್ಟ ರವಿಕುಮಾರ್, ತೊರೆಚಾಕನಹಳ್ಳಿ ಶಂಕರೇಗೌಡ, ಪ್ರೊ.ಬಿ.ಎಸ್.ಬೋರೇಗೌಡ, ಕ್ಯಾತಘಟ್ಟ ಗಿರೀಶ್, ಪುಟ್ಟರಾಮು, ಚಂದ್ರಶೇಖರ್, ಶ್ರೀನಿವಾಸ, ಮಣಿಗರೆ ರಾಮಚಂದ್ರ, ಅಣ್ಣೂರು ಸಿದ್ದಪ್ಪ, ಕೆ.ಕಬ್ಬಾಳಯ್ಯ, ಕರಡಕೆರೆ ಯೋಗೇಶ್, ಗುಡಿಗೆರೆ ಬಸವರಾಜು, ರಘು ವೆಂಕಟೇಗೌಡ, ಪ್ರಜಾಪ್ರಿಯ ವೆಂಕಟೇಶ್ ಇದ್ದರು.