ನ್ಯೂಸ್

ಕೊಡಗು ವಿವಿ ಸ್ನಾತಕೋತ್ತರ ಫಲಿತಾಂಶ ಪ್ರಕಟ

ಮಡಿಕೇರಿ:

ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್‌ನ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಆನ್ಸೆನ್ ತಂತ್ರಾAಶದಲ್ಲಿ ಬುಧವಾರ ಪ್ರಕಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಯಾವುದೇ ವಿಶ್ವವಿದ್ಯಾಲಯಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ನಡೆಸಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ 2024-25 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ಕೇವಲ ಎರಡು ವಾರಗಳಲ್ಲಿ ಪ್ರಕಟಿಸುವ ಮೂಲಕ ಈ ಹಿಂದಿನAತೆಯೇ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಹಿರಿಮೆಯನ್ನು ಕೊಡಗು ವಿಶ್ವವಿದ್ಯಾಲಯ ಮುಂದುವರಿಸಿಕೊAಡು ಬಂದಿದೆ.

ಕರ್ನಾಟಕ ಸರ್ಕಾರದಿಂದ ನೂತನವಾಗಿ ಕೊಡಗು ವಿಶ್ವವಿದ್ಯಾಲಯ ಆರಂಭಗೊAಡು ನಂತರ ಚೊಚ್ಚಲ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿವಿಧ ಸ್ನಾತಕ ಪದವಿಗಳ ಪರೀಕ್ಷಾ ಫಲಿತಾಂಶವನ್ನು ಕೇವಲ ಒಂದು ವಾರದಲ್ಲಿ ಪ್ರಕಟಿಸಿದ ಪ್ರಥಮ ವಿಶ್ವವಿದ್ಯಾಲಯ ಎಂಬ ಹಿರಿಮೆಗೂ ಕೂಡ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಅಷ್ಟೇ ಅಲ್ಲದೆ ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿರುವ ಘಟಕ ಮಹಾವಿದ್ಯಾಲಯ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ ಸಂಪೂರ್ಣ ಸಹಕಾರದೊಂದಿಗೆ ಮೌಲ್ಯಮಾಪನ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ಕಾಲ ಕಾಲಕ್ಕೆ ನಿರ್ವಹಿಸಿದ್ದು, ಮೌಲ್ಯಮಾಪನ ವಿಭಾಗದ ಅಧಿಕಾರಿಗಳ ಬದ್ಧತೆಯ ಸಮಯ ಪರಿಪಾಲನೆಯಿಂದಾಗಿ ಬಿಎಡ್ ಪ್ರಶಿಕ್ಷಣಾರ್ಥಿಗಳ ಮತ್ತು ವಿವಿಧ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶಗಳನ್ನು ಶೀಘ್ರದಲ್ಲಿ ಪ್ರಕಟಿಸಿದ ಸಾಧನೆ ಈ ವಿಶ್ವವಿದ್ಯಾಲಯದ್ದಾಗಿದೆ.

ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ವಿಶ್ವವಿದ್ಯಾಲಯದ ವೆಬ್ ಸೈಟ್ kuk.karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ ಎಂದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಆದ ಡಾ. ಎಂ. ಸುರೇಶ್, ಮೌಲ್ಯಮಾಪನ ವಿಭಾಗದ ವಿಶೇಷ ಅಧಿಕಾರಿಗಳಾದ ಪ್ರೊ. ಎಂ.ಎನ್. ರವಿಶಂಕರ್, ಯುಯುಸಿಎಂಎಸ್ ನೋಡಲ್ ಅಧಿಕಾರಿ ಹೆಚ್.ಎಸ್. ಗಗನ್, ಉಪನ್ಯಾಸಕÀ ಡಾ. ಜಮೀರ್ ಅಹಮದ್ ಈ ಸಂದರ್ಭ ಇದ್ದರು.