ನ್ಯೂಸ್

ಕೊಲೆ ಪ್ರಕರಣದ ಸಜಾ ಬಂಧಿ ಸೆಂಟ್ರಲ್ ಜೈಲ್‌ನಲ್ಲಿ ಆತ್ಮಹತ್ಯೆ

ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯೊಬ್ಬ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಗರದ ಎಸ್‌ಎಸ್ ಕಾಲನಿಯ ಮಂಜುನಾಥ್(33) ಆತ್ಮಹತ್ಯೆ ಮಾಡಿಕೊಂಡ ಕೈದಿ.
ಕೊಲೆ ಪ್ರಕರಣವೊಂದರಲ್ಲಿ ಶಿಕ್ಷಗೆ ಗುರಿಯಾಗಿ ಬಂದಿದ್ದ ಈತ ಶುಕ್ರವಾರ ಸಂಜೆ ಜೈಲಿನ ತುಂಗಾ ವಿಭಾಗದ ರೂಂ ನಂಬರ್ 35ರ ಶೌಚ ಗೃಹದಲ್ಲಿ ಟವಲ್ನಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಕ್ಷಣ ಜೈಲು ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಶನಿವಾರ ಬೆಳಗ್ಗೆ ನ್ಯಾಯಾಧೀಶರ ಸಮ್ಮುಖದಲ್ಲಿ ಪಂಚೆನಾಮೆ ವಿಡಿಯೋ ಚಿತ್ರೀಕರಣದ ಮೂಲಕ ಶವಪರೀಕ್ಷೆ ನಡೆಸಲಾಯಿತು.