ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಕಲ ರೀತಿಯಲ್ಲಿ ಸನ್ನದ್ಧವಾಗುತ್ತಿರುವ ಕಾಂಗ್ರೆಸ್ಗೆ ಒಂದೊಂದೇ ಸವಾಲು ಎದುರಾಗುತ್ತಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ವಿಚಾರಕ್ಕೆ ಸಂಬಂಧಿಸಿದಂತೆ ಸಮಸ್ಯೆ ಉಲ್ಬಣಿಸುತ್ತಿದ್ದು, ಮಂಗಳವಾರ ಪದ ಮುಖಂಡರು, ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿ ಪ್ರತ್ಯೇಕ ಸಭೆಗಳಲ್ಲಿ ಪಾಲ್ಗೊಂಡರು.
ಹಿರಿಯ ನಾಯಕ ಎಂ.ಆರ್.ಸೀತಾರಾಂ ಪರವಾಗಿ ಸೋಮವಾರ ಒಂದು ತಂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪದಲ್ಲೇ ಉಳಿಸಿಕೊಳ್ಳಬೇಕೆಂದು ಆಗ್ರಹಿಸಿತ್ತು. ಮೂರು ಜಿಲ್ಲೆಗಳಲ್ಲಿ ಪ್ರಬಲವಾಗಿರುವ ಬಲಿಜ ಸಮುದಾಯದ ನಾಯಕರನ್ನು ಕಡೆಗಣಿಸಬೇಡಿ ಎಂದು ಒತ್ತಾಯಿಸಿತ್ತು. ಇದೇ ವೇಳೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಎಂ.ಆರ್.ಸೀತಾರಾಂ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು.
ಈ ಭರವಸೆ ನೀಡುತ್ತಿದ್ದಂತೆ ಇನ್ನೊಂದು ತಂಡ ಅಸಮಾಧಾನಗೊಂಡಿದೆ. ಆರ್.ಎಲ್.ಜಾಲಪ್ಪ ಅವರ ಮೊಮ್ಮಗ ವಿನಯ್ ಶ್ಯಾಮ್ ಬೆಂಬಲಿಗರು ಮಂಗಳವಾರ ಕೆಪಿಸಿಸಿ ಕಚೇರಿಗೆ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರಕ್ಕೆ ನವೀನ್ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ಕೊನೆಗೆ ಅವರನ್ನೆಲ್ಲ ಕರೆದು ಕೂರಿಸಿಕೊಂಡ ಡಿ.ಕೆ.ಶಿವಕುಮಾರ್, ಈ ಬಗ್ಗೆ ಪರಿಶೀಲಿಸೋಣ ಎಂದು ಸಮಾಧಾನಪಡಿಸಿದರು.
ಇತ್ತ ಸಿದ್ದರಾಮಯ್ಯ ಮನೆಯಲ್ಲಿ ಪದ ಕೋಲಾರ ಟಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು. ಅಸಮಾಧಾನಗೊಂಡಿರುವ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರು ಮುಂದಿನ ನಡೆ ಬಗ್ಗೆ ಅಲ್ಲಿ ಚರ್ಚೆ ನಡೆದಿತ್ತು. ತಮ್ಮ ಗಮನಕ್ಕೆ ಬಾರದೇ ಸಿದ್ದರಾಮಯ್ಯ- ರಮೇಶ್ ಕುಮಾರ್ ಜೋಡಿ ದೆಹಲಿಯಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜೆಡಿಎಸ್ನ ನಾಯಕರನ್ನು ಪಕ್ಕೇ ಸೇರಿಸಿಕೊಂಡಿದ್ದರು. ಇದು ಮುನಿಯಪ್ಪ ಅವರನ್ನು ಕೆರಳಿಸಿತ್ತು.
ಮಾಜಿ ಸಭಾಧ್ಯ ರಮೇಶ್ ಕುಮಾರ್, ಸೇರಿ 20ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಮುನಿಯಪ್ಪ ಮಾಡಬಹುದಾದ ಹಾನಿಯ ಬಗ್ಗೆ ಹಾಗೂ ಒಗ್ಗಟ್ಟಿನಿಂದ ಇರುವ ಬಗ್ಗೆ ಆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.