ನ್ಯೂಸ್

ಕೋಲಾರ ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ ಶಾಸಕರಿಂದ ವಿಶೇಷ ಅನುದಾನ ಕೊಡಿಸಲು ಮನವಿ / ಡಿಸಿ ಡಾ.ಎಂ.ಆರ್.ರವಿ

ವಿಜಯವಾಣಿ ಸುದ್ದಿಜಾಲ ಕೋಲಾರ

ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಗ್ಯಾಲರಿ ಸುತ್ತ ಮೇಲ್ಚಾವಣೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಅಗತ್ಯವಾದ ವಿಶೇಷ ಅನುದಾನ ಮಂಜೂರು ಮಾಡಿಸಲು ಶಾಸಕರಿಗೆ ಮನವಿ ಮಾಡೋಣ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿನ ಜಿಲ್ಲಾ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ನಂತರ ಕ್ರೀಡಾಂಗಣವನ್ನು ವೀಕ್ಷಿಸಿ ಮಾತನಾಡಿ, ಜಿಲ್ಲಾ ಕೇಂದ್ರದ ಘನತೆಗೆ ತಕ್ಕಂತೆ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿಗೊಳಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶಾಸಕರಿಂದ ವಿಶೇಷ ಅನುದಾನ ಪಡೆಯುವುದು, ವಿವಿಧ ಕಂಪನಿಗಳ ಸಿಎಸ್‌ಆರ್ ನಿಧಿ ಪಡೆಯಲು ಸಹ ಯತ್ನಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕ್ರೀಡಾಂಗಣ ಮತ್ತು ಇಲ್ಲಿಗೆ ಬರುವ ಕ್ರೀಡಾಪಟುಗಳಿಗೆ ಅಗತ್ಯವಾದ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ ಅಗತ್ಯವಿದ್ದು, ಕೊಳವೆ ಬಾವಿ ಕೊರೆಸುವ ಕುರಿತು ಗಮನಹರಿಸುವುದಾಗಿ ಭರವಸೆ ನೀಡಿದರು.

ಇದು ಜಿಲ್ಲಾ ಕ್ರೀಡಾಂಗಣವಾಗಿದ್ದು, ಇಲ್ಲಿ ರಾಷ್ಟಿçÃಯ ಹಬ್ಬಗಳ ಜತೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡೆಗಳು ನಡೆಸಲು ಅವಕಾಶವಿದೆ, ಅದಕ್ಕೆ ತಕ್ಕಂತೆ ಕ್ರೀಡಾಂಗಣಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಿಂಥೆಟಕ್ ಟ್ರಾö್ಯಕ್ ನಿರ್ಮಾಣ ಕಾಮಗಾರಿಯ ನಂತರ ಕ್ರೀಡಾಂಗಣವನ್ನು ಅತ್ಯಂತ ಸುಸಜ್ಜಿತವಾಗಿ ನಿರ್ವಹಿಸಲಾಗತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸಿಂಥೆಟಿಕ್ ಟ್ರಾö್ಯಕ್ ಹೊರತಾಗಿ ನಡೆಸುವ ವಿವಿಧ ಕ್ರೀಡೆಗಳಿಗೆ ಕ್ರೀಡಾಂಗಣದ ಸುತ್ತಮುತ್ತ ಇರುವ ಜಾಗವನ್ನು ಸದ್ಬಳಕೆ ಮಾಡಿಕೊಂಡು ಪ್ರತ್ಯೇಕವಾಗಿ ಕ್ರೀಡಾಂಗಣಗಳನ್ನು ಅಭಿವೃದ್ದಿಪಡಿಸಬೇಕು ಎಂದರು.

ಇದಾದ ನಂತರ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಅಲ್ಲಿನ ಕ್ರೀಡಾ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಸುಸಜ್ಜಿತ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳು ವಸತಿ ಶಾಲೆಯಲ್ಲಿ ಕ್ರೀಡಾ ಸೌಲಭ್ಯ ಬಳಸಿಕೊಂಡು ರಾಜ್ಯ, ರಾಷ್ಟಿçÃಯ, ಅಂತರರಾಷ್ಟಿçÃಯ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಅಗತ್ಯವಾದ ಪೂರಕ ವಾತಾವರಣ ಸೃಷ್ಟಿಗೆ ಸೂಚನೆ ನೀಡಿದರು.

ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ಕೋಚ್‌ಗಳ ಕುರಿತು ಮಾಹಿತಿ ಪಡೆದ ಡಿಸಿ ಯವರು, ರಾಜ್ಯ, ರಾಷ್ಟಿçÃಯ ಕ್ರೀಡೆಗಳಲ್ಲಿ ನಮ್ಮ ವಸತಿ ನಿಲಯದ ಕ್ರೀಡಾಳುಗಳ ಸಾಧಕರಾಗಿ ಹೊರಹೊಮ್ಮುವಂತೆ ಅವರನ್ನು ಸಜ್ಜುಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಮಾತನಾಡಿ, ಈ ಹಿಂದೆ ಕ್ರೀಡಾಂಗಣದಲ್ಲಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು ಎಂಬ ಆರೋಪವಿತ್ತು, ಆದರೆ ಇದೀಗ ಅಂತಹ ದೂರುಗಳಿಂದ ಮುಕ್ತವಾಗಿದೆ. ಇಲ್ಲಿ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಪೂರಕ ವಾತಾವರಣ ಸೃಷ್ಟಿಗೆ ಅಗತ್ಯವಾದ ಬಂದೋಬಸ್ತ್ ಸೌಲಭ್ಯವನ್ನು ಪೊಲೀಸ್ ಇಲಾಖೆ ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.

ಕ್ರೀಡಾಂಗಣ ನಿರ್ವಹಣಾ ಸಮಿತಿಯ ಸದಸ್ಯರೂ ಆದ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ.ಬಾಗೇವಾಡಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ, ಡಿಡಿಪಿಐ ಕೃಷ್ಣಮೂರ್ತಿ, ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ಅಶ್ವಿನ್, ನಗರಸಭೆ ಆಯುಕ್ತ ಪ್ರಸಾದ್ ಮತ್ತಿತರರು ಹಾಜರಿದ್ದರು.

ಚಿತ್ರ ೦೫ ಕೆ.ಎಲ್.ಆರ್. ೧೦ ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿನ ಜಿಲ್ಲಾ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿ ಸಭೆಯ ನಂತರ ಪಕ್ಕದಲ್ಲೇ ಇದ್ದ ಕ್ರೀಡಾ ವಸತಿ ನಿಲಯ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್.ಪಿ. ಬಿ.ನಿಖಿಲ್ ಇದ್ದರು.