ವಿಜಯವಾಣಿ ಸುದ್ದಿಜಾಲ ಕೋಲಾರ
ಬಯಲು ಸೀಮೆ ಜಿಲ್ಲೆಯಾಗಿರುವ ಕೋಲಾರ ಜಿಲ್ಲೆಯಲ್ಲಿ ಯಾವುದೇ ನೀರಾವರಿ ಮೂಲಗಳಿಲ್ಲದ ಕಾರಣ ಜಿಲ್ಲೆಯು ರಾಜ್ಯ ರಾಜಧಾನಿಗೆ ಹೊಂದಿಕೊAಡಿರುವದರಿAದ ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ದಿಗೆ ಹೆಚ್ಚಿನ ಹೊತ್ತು ನೀಡುವಂತೆ ಒತ್ತಾಯಿಸಿ, ಸಂಸದ ಮಲ್ಲೇಶ್ ಬಾಬು ಅತಿ ಸಣ್ಣ, ಸಣ್ಣ, ಮದ್ಯಮ ಕೈಗಾರಿಕೆ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು..
ನವದೆಹಲಿಯ ಕೇಂದ್ರ ಕಛೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಕೃಷಿ ಆಧಾರಿತ ಜಿಲ್ಲೆಯಾಗಿರುವ ಕೋಲಾರ ಜಿಲ್ಲೆಗೆ ಕೈಗಾರಿಕ ಯೋಜನೆಗಳಿಗೆ ವಿಶೇಷ ಅನುದಾನಗಳು ಮಂಜೂರು ಮಾಡಬೇಕು ಮತ್ತು ಈಗಾಗಲೇ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು. ಹಾಗೂ ಜಿಲ್ಲೆಗೆ ಇ.ಎಸ್.ಐ. ಆಸ್ಪತ್ರೆಯ ಬಗ್ಗೆ ಬೇಡಿಕೆ ಇಟ್ಟರು.
ಸಂಸದರ ಮನವಿಗೆ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ರೂಪಿಸಬೇಕಾದ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಅಲ್ಪಸಂಖ್ಯಾತರ ಕೇಂದ್ರ ಸಚಿವರ ಭೇಟಿ :
ಕೋಲಾರ ಲೋಕಸಭಾ ವ್ಯಾಪ್ತಿಯ ಅಲ್ಪ ಸಂಖ್ಯಾತ ಕೇಂದ್ರೀಕೃತ ಪ್ರದೇಶಗಳನ್ನು ಅಭಿವೃದ್ದಿಪಡಿಸುವಂತೆ ಸಂಸದ ಮಲ್ಲೇಶ್ ಬಾಬು ಬುಧವಾರ ನವದೆಹಲಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಕೇಂದ್ರ ಸಚಿವ ಕಿರೆನ್ ರೆಜ್ಜು ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಅಲ್ಪಸಂಖ್ಯಾತರು ವಾಸಿಸುವ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ದಿ, ಸಮುದಾಯ ಭವನ, ದೇವಾಲಯ ಮತ್ತು ವಸತಿ ಶಾಲೆಗಳು ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳೊಂದಿಗೆ ಅಲ್ಪಸಂಖ್ಯಾತರ ಕೇಂದ್ರೀಕೃತ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು..
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಯೋಜನೆಗಳನ್ನು ಶೀಘ್ರದಲ್ಲಿ ಅಭಿವೃದ್ಧಿಪಡಿಸುವ ಭರವಸೆ ನೀಡಿದರು.
ಚಿತ್ರ ೨೬ ಕೆ.ಎಲ್.ಆರ್. ೦೧ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರನ್ನು ಭೇಟಿ ಮಾಡಿದ ಸಂಸದ ಮಲ್ಲೇಶ್ ಬಾಬು