ನ್ಯೂಸ್

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಾಂಗ್ರೇಸ್ ಹೈಕಮಾಂಡ್ ತೀರ್ಮಾನ ಮಾಡುತ್ತದೆ/ ಸಚಿವ ಕೆ.ಹೆಚ್.ಮುನಿಯಪ್ಪ

ವಿಜಯವಾಣಿ ಸುದ್ದಿಜಾಲ ಕೋಲಾರ

ರಾಜ್ಯದಲ್ಲಿ ಮೂರು ಡಿ.ಸಿ.ಎಂ.ಗಳ ಆಯ್ಕೆ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರೂ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುವುದನ್ನು ತಿಳಿಸುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಗೌರಿ ಗಣೇಶ ಹಬ್ಬದ ಪ್ರಯುಕ್ತ ಮುಳಬಾಗಿಲಿನ ಕುರುಡು ಮಲೆಯಲ್ಲಿ ನಡೆಯುವ ರಥೋತ್ಸವಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್.ಮುನಿಯಪ್ಪ ನವರಿಗೆ ನಗರದ ಬೈಪಾಸ್ ಬಳಿ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನೀಡಿದ ಅದ್ದೂರಿ ಸ್ವಾಗತ ಸ್ವೀಕರಿಸಿ ಮಾತನಾಡಿದರು.

ಪ್ರತಿವರ್ಷದಂತೆ ಕುರುಡುಮಲೆಯಲ್ಲಿ ನಡೆಯುವ ರಥೋತ್ಸವದಲ್ಲಿ ಭಾಗಿಯಾಗಲು ತೆರಳುತ್ತಿದ್ದು, ಮುಳಬಾಗಿಲು ಆಂಜನೇಯ ದೇವಾಲಯ ಹಾಗೂ ದರ್ಗಾಗೆ ಭೇಟಿ ನೀಡಿದ ನಂತರ ಮಳೆ ಕಡಿಮೆಯಾಗಿ ಬರಗಲಾದ ಹಿನ್ನಲೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತೆಗೆದುಕೊಂಡಿರು ಕಾರ್ಯಕ್ರಮಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿದರು.

ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿ ಮಳೆ ಬೆಳೆ ಚೆನ್ನಾಗಿ ಆಗಿ ಜನತೆ ಸುಖ ಶಾಂತಿಯಿAದ ಬಾಳಲಿ ಎಂದು ಸಚಿವರು ಆಶಿಸಿದರು. ಜೆ.ಡಿ.ಎಸ್ ಹಾಗೂ ಬಿ.ಜೆ.ಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಜನ ನಮ್ಮ ಪರ ಆದೇಶ ಕೊಟ್ಟಿದ್ದಾರೆ, ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವುದೇ ಕಾಂಗ್ರೆಸ್ ಪಕ್ಷದ ಮೊದಲ ಆದ್ಯತೆ, ಈಗಾಗಲೇ ನಾಲ್ಕು ಭರವಸೆಗಳನ್ನು ಈಡೇರಿಸಿದ್ದು, ನುಡಿದಂತೆ ನಡೆದಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲಿ ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಮೂರು ಜನ ಡಿ.ಸಿ.ಎಂ.ಗಳು ಆಗಬೇಕೆನ್ನುವ ಒತ್ತಾಯ ಆಗುತ್ತಿರುವ ಬಗ್ಗೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ತಾವು ಸ್ಪರ್ಧೆ ಮಾಡುವಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಡಿ.ಸಿ.ಎಂ.ಗಳ ಆಯ್ಕೆ ಹಾಗೂ ಮುಂದಿ ಲೋಕಸಭಾ ಚುನಾವಣೆಯಲ್ಲಿ ಯಾರು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಕ್ಕಿ ವಿತರಣೆ ತಡವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪನವರು ಕೇಂದ್ರ ಸರ್ಕಾರದ ಅಕ್ಕಿ ನೀಡದ ಕಾರಣ ಕಾರ್ಡ್ ದಾರರಿಗೆ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಕಳೆದ ಎರಡು ತಿಂಗಳಿAದ ಹಣ ಭರ್ತಿ ಮಾಡಿದ್ದು ಅಕ್ಕಿಗಾಗಿ ಆಂಧ್ರ ರಾಜ್ಯದೊಂದಿಗೆ ಮಾತು ಕಥೆ ನಡೆಯುತ್ತಿದೆ. ಅಕ್ಕಿ ಸಿಗುವವರೆಗೆ ಹಣ ನೀಡಲಾಗಯವುದು. ಅಕ್ಕಿ ಸಿಕ್ಕ ತಕ್ಷಣ ಅಕ್ಕಿಯ ವಿತರಣೆಗೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮಾಜಿ ಶಾಸಕ ಎ.ನಾಗರಾಜ್, ಒಬಿಸಿ ಮಂಜುನಾಥ, ಮಾಲೂರು ಅಶ್ವಥ್ ರೆಡ್ಡಿ, ಲಾಲಬಹದ್ದೂರ್ ಶಾಸ್ತಿç ಮುಂತಾದವರಿದ್ದರು.

ಚಿತ್ರ ೧೯ ಕೆ.ಎಲ್.ಆರ್. ೦೨ : ಮುಳಬಾಗಿಲು ಕುರುಡುಮಲೆಗೆ ತೆರಳಲು ಬಂದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪನವರನ್ನು ಕೋಲಾರದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಕಾಂಗ್ರೇಸ್ ಕಾರ್ಯಕರ್ತರು.