ನ್ಯೂಸ್

ಕೋಲಾರಕ್ಕೆ ಬರಬೇಕಾದ ಕೆ.ಸಿ.ವ್ಯಾಲಿ ನೀರು ಹರಿಸಬೇಕು / ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಕೆ.ಸಿ.ವ್ಯಾಲಿ ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೇಸ್ ಶಾಸಕರ ಒತ್ತಾಯ

ವಿಜಯವಾಣಿ ಸುದ್ದಿಜಾಲ ಕೋಲಾರ
ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕರೆಗಳಿಗೆ ಕೆ.ಸಿ.ವ್ಯಾಲಿ ನೀರು ತುಂಬಿಸುವ ಪ್ರಕ್ರಿಯೆಗೆ ಸಂಬAಧಿಸಿದAತೆ ಕಾಮಗಾರಿಗಳ ಕುರಿತು ಬೆಂಗಳೂರಿನಲ್ಲಿ ಮಂಗಳವಾರ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮತ್ತು ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಕೆ.ಸಿ.ವ್ಯಾಲಿ ನೀರು ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆರೆಗಳಿಗೆ ಹರಿಸಲು ಈ ಹಿಂದೆ ಯೋಜನೆಯನ್ನು ರೂಪಿಸಿ ಕೆರೆಗಳಿಗೆ ನೀರು ಹರಿಸಲಾಯಿತು. ೧ನೇ ಹಂತದ ಕೆರೆಗಳಿಗೆ ನೀರು ಹರಿಸಲಾಗಿತ್ತು. ೨ನೇ ಹಂತದ ಕೆರೆಗಳಿಗೆ ನೀರು ಹರಿಸಲು ಪೈಪ್ ಲೈನ್ ಅಳವಡಿಕೆ ಕಾಮಗಾರಿ ಮುಂದುವರೆದಿತ್ತು.

ಕಳೆದ ಬೇಸಿಗೆಯಲ್ಲಿ ಕೆ.ಸಿ.ವ್ಯಾಲಿ ನೀರಿನ ಪ್ರಮಾಣ ಕಡಿಮೆಯಾದ ಕಾರಣ ಅನೇಕ ಕೆರೆಗಳಲ್ಲಿ ನೀರು ಖಾಲಿಯಾಯಿತು. ಜನಪ್ರತಿನಿಧಿಗಳು ಚುನಾವಣಾ ಗುಂಗಿನಲ್ಲಿ ಇದ್ದ ಕಾರಣ ಕೆ.ಸಿ.ವ್ಯಾಲಿ ನೀರಿನ ಕಡೆ ಗಮನ ಹರಿಸಲಿಲ್ಲ. ಸಾರ್ವಜನಿಕರು ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸುವಂತಾದರು.

ಕೋಲಾರ ಜಿಲ್ಲೆಯ ಎಲ್ಲಾ ಕಾಂಗ್ರೇಸ್ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರ ಬಳಿ ಕೆ.ಸಿ.ವ್ಯಾಲಿ ನೀರು ಕಡಿಮೆಯಾಗಿದೆ. ನಮಗೆ ಬರಬೇಕಾದ ನೀರು ಬರುತ್ತಿಲ್ಲ. ಪ್ರಾರಂಭದಲ್ಲಿ ಒಪ್ಪಂದ ಆದ ಪ್ರಮಾಣ ನೀರು ಈಗ ಬರುತ್ತಿಲ್ಲ. ಬೇರೆ ಬೇರೆ ಕಡೆಗಳಿಗೆ ನೀರು ಹರಿಸಲಾಗುತ್ತಿದೆ. ಆದ ಕಾರಣ ನಮ್ಮ ಪಾಲು ನಮಗೆ ಬರಬೇಕು ಎಂದು ಒತ್ತಾಯಪಡಿಸಿದ ಹಿನ್ನಲೆಯಲ್ಲಿ ಮಂಗಳವಾರ ಕೆ.ಸಿ.ವ್ಯಾಲಿಯ ಅಧಿಕಾರಿಗಳ ಸಭೆ ನಡೆಸಲಾಯಿತು.

ಕೋಲಾರ ಭಾಗಕ್ಕೆ ಬರಬೇಕಾಗಿದ್ದ ನೀರಿನಲ್ಲಿ ಹೊಸಕೋಟೆಗೆ ೩೦ ಎಂ.ಎಲ್.ಡಿ, ಆನೇಕಲ್ಲಿಗೆ ೯೦ ಎಂ.ಎಲ್.ಡಿ. ನೀರು ಹರಿಸಲಾಗುತ್ತಿರುವುದರಿಂದ ಕೋಲಾರಕ್ಕೆ ನೀರು ಕಡಿಮೆಯಾಗಿರುವ ಮಾಹಿತಿ ಅಧಿಕಾರಿಗಳಿಂದ ಲಭ್ಯವಾಯಿತು. ಇದರಿಂದ ಬೇಸರ ವ್ಯಕ್ತಪಡಿಸಿದ ಕೋಲಾರ ಜಿಲ್ಲೆಯ ಕಾಂಗ್ರೇಸ್ ಶಾಸಕರು ನಮ್ಮ ಪಾಲಿನ ನೀರು ನಮಗೆ ಬರುವಂತಾಗಬೇಕೆAದು ಸಭೆಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಿ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ತೀರ್ಮಾನಿಸಲಾಯಿತು ಎನ್ನಲಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಜಿಲ್ಲೆಯ ಶಾಸಕರಾದ ಕೊತ್ತೂರು ಜಿ ಮಂಜುನಾಥ್, ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಸಮೃದ್ದಿ ಮಂಜುನಾಥ, ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್ ಮನೋಹರ ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಸಣ್ಣ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರ ರಾಘವನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

ಚಿತ್ರ ೧೮ ಕೆ.ಎಲ್.ಆರ್. ೦೪ : ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರ ಬೆಂಗಳೂರಿನ ಕಛೇರಿಯಲ್ಲಿ ಕೆ.ಸಿ. ವ್ಯಾಲಿಗೆ ಸಂಬAಧಿಸಿದAತೆ ಅಧಿಕಾರಿಗಳು ಮತ್ತು ಶಾಸಕರ ಸಭೆ ನಡೆಸಲಾಯಿತು.