ನ್ಯೂಸ್

ಕೋಲಾರದ ಎಸ್.ಕಲ್ಪನಾ ದೆಹಲಿ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ

ವಿಜಯವಾಣಿ ಸುದ್ದಿಜಾಲ ಕೋಲಾರ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಕುಸ್ತಿ-ಕಬಡ್ಡಿ ಪಂದ್ಯಾವಳಿಗಳು ಅ.೧೬ ರಿಂದ ೨೦ರವರೆಗೆ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕಬಡ್ಡಿ ಪಂದ್ಯಾವಳಿಯಲ್ಲಿ ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಕಲ್ಪನಾ.ಎಸ್ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ೧೪ ಮಂದಿ ಆಯ್ಕೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯ ಅಪರ ಜಿಲ್ಲಾಧಿಕಾರಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಕಲ್ಪನಾ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ದೆಹಲಿಯಲ್ಲಿ ನಡೆಯುವ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರ ೧೨ ಕೆ.ಎಲ್.ಆರ್. ೦೧ : ಎಸ್.ಕಲ್ಪನಾ ಭಾವಚಿತ್ರ