ನ್ಯೂಸ್

ಕೋಲಾರದಲ್ಲಿ ಅದ್ದೂರಿಯಾಗಿ ನಾಡ ಹಬ್ಬ ರಾಜ್ಯೋತ್ಸವನ್ನು ಆಚರಣೆ/ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸಬೇಕು/ಅಪರ ಜಿಲ್ಲಾಧಿಕಾರಿ ಮಂಗಳ

ವಿಜಯವಾಣಿ ಸುದ್ದಿಜಾಲ ಕೋಲಾರ
ಪ್ರತಿ ವರ್ಷದಂತೆ ನವೆಂಬರ್ ೧ ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕನ್ನಡಾಭಿಮಾನಿಗಳು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಮಂಗಳ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿ ರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಧ್ವಜಾರೋಹಣ ನೇರವೆರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು.

ನ. ೧ ರಂದು ಬೆಳಿಗ್ಗೆ ೮.೩೦ಗಂಟೆಗೆ ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ಸರ್ಕಾರಿ ನೌಕರರು ಉಪಸ್ಥಿತರಿರಬೇಕು. ೮.೫೫ ಕ್ಕೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ್ ಅವರು ಕ್ರೀಡಾಂಗಣಕ್ಕೆ ಆಗಮಿಸುವರು. ನಂತರ ಅವರು ರಾಷ್ಟ್ರ ಧ್ವಜಾರೋಹಣ ನೇರವೆರಿಸಿ, ವಿವಿಧ ದಳಗಳ ವೀಕ್ಷಣೆ ಮಾಡುವರು. ನಂತರ ಸಚಿವರು ಜಿಲ್ಲೆಯ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡುವರು. ಮತ್ತು ೯.೩೦ ಗಂಟೆಗೆ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುವರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಿ ಯಶಸ್ವಿಗೊಳಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿ ಇಲಾಖೆಯು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತ್ತು ತಮ್ಮ ಇಲಾಖೆಗಳ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯೋತ್ಸವ ಕಾರ್ಯಕ್ರಮದ ಕವಾಯತ್ತು ಪ್ರದರ್ಶನದಲ್ಲಿ ಹಾಗೂ ಗೌರವ ರಕ್ಷೆ ನೀಡಲು ಆಯ್ಕೆಯಾಗುವ ದಳಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ನೀಡಲಾಗುವುದು. ಉತ್ತಮ ತಂಡಗಳನ್ನು ಅಂತಿಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು ಮತ್ತು ಉತ್ತಮ ಪ್ರದರ್ಶನ ನೀಡುವ ದಳಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದುದೆಂದು ಅವರು ತಿಳಿಸಿದರು.

ಅ.೩೧ ರಿಂದ ನ.೨ ರವರೆಗೆ ಕೋಲಾರ ಜಿಲ್ಲಾ ಕೇಂದ್ರದ ಎಲ್ಲ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಾಂಕಾರ ಮಾಡಬೇಕು. ರಾಜ್ಯೋತ್ಸವ ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ಭಾಗವಹಿಸುವ ವಿದ್ಯಾರ್ಥಿಗಳಿಗೆ ಪಹಾರದ ವ್ಯವಸ್ಥೆಯನ್ನು ಸಂಬAಧಪಟ್ಟ ಇಲಾಖೆಗಳು ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಡಾ. ಮೈತ್ರಿ, ಜಿಲ್ಲಾ ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ರವಿಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹಾಗೂ ಲೋಕೋಪಯೋಗಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಅಗ್ನಿಶಾಮಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

ಚಿತ್ರ ೧೬ ಕೆ.ಎಲ್.ಆರ್. ೦೨ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ, ಜಿಲ್ಲಾ ಉಪವಿಭಾಗಾಧಿಕಾರಿ ಡಾ. ಮೈತ್ರಿ, ಜಿಲ್ಲಾ ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ರವಿಚಂದ್ರ,