ನ್ಯೂಸ್

ಕೋಲಾರದಲ್ಲಿ ಸಂಭ್ರಮ ಸಡಗರದಿಂದ ಸ್ವಾತಂತ್ರ‍್ಯ ದಿನಾಚರಣೆ/ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ/ಒಳಚರಂಡಿ ಜಾಲ, ಗೃಹ ಸಂಪರ್ಕ ಕ್ಕಾಗಿ ಕೋಲಾರ ನಗರಕ್ಕೆ ೬೦ ಕೋಟಿಗಳ ಅನುದಾನ.

ವಿಜಯವಾಣಿ ಸುದ್ದಿಜಾಲ ಕೋಲಾರ
ಸರ್ಕಾರ ಜನರಿಗೆ ನೀಡಿದ ಭರವಸೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಕೋಲಾರ ಜಿಲ್ಲೆಗೆ ಭರಪೂರ ಅನುದಾನ ಒದಗಿಸಲು ಶ್ರಮ ವಹಿಸಲಾಗಿದೆ. ಒಳಚರಂಡಿ ಜಾಲ, ಗೃಹ ಸಂಪರ್ಕ ಕ್ಕಾಗಿ ಕೋಲಾರ ನಗರಕ್ಕೆ ೬೦ ಕೋಟಿಗಳ ಅನುದಾನ, ರಾಬರ್ಟ್ ಸನ್ ಪೇಟೆ ಅಭಿವೃದ್ಧಿಗೆ ೨೦ಕೋಟಿ ಅನುದಾನ ಅನುಮೋದನೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ ತಿಳಿಸಿದರು.

ಸ್ವಾತಂತ್ರ‍್ಯ ದಿನದ ಅಂಗವಾಗಿ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಮಾತನಾಡಿ ವೇಮಗಲ್ ಕುರಗಲ್ ನಲ್ಲಿ ವಿವಿಧ ಯೋಜನೆಗಳಿಗಾಗಿ ೩.೫೦ ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೊಚ್ಚು ಸಂಸ್ಕಾರಣಾ ಘಟಕ ನಿರ್ಮಾಣಕ್ಕಾಗಿ ೨೫.೧೧ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಮೃತ್ ೨.೦ ಯೋಜನೆಯಡಿಯಲ್ಲಿ ನೀರು ಸರಬರಾಜು ಮತ್ತು ಹಸಿರು ವಲಯ ಹಾಗೂ ಪಾರ್ಕ್ ಗಳಿಗಾಗಿ ಜಿಲ್ಲೆಗೆ ೪೦ ಕೋಟಿ ಅನುದಾನ ನೀಡಲಾಗಿದೆ. ಯಾರಗೊಳ್ ಆಣೆಕಟ್ಟಿನಿಂದ ಬಂಗಾರಪೇಟೆ, ಕೋಲಾರ ಹಾಗೂ ಮಾಲೂರು ತಾಲ್ಲೂಕುಗಳ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದಕ್ಕಾಗಿ ೩೦೮.೪೬ ಕೋಟಿ ವೆಚ್ಚ ಮಾಡಲಾಗಿದೆ. ಎಂದು ತಿಳಿಸಿದರು.

ಕೋಲಾರ ನಗರದ ಹೊರವಲಯದಲ್ಲಿ ಹೊರವರ್ತುಲ ರಸ್ತೆ ಅಭಿವೃದ್ಧಿಗೆ ೧೦೦ ಕೋಟಿ ಅನುದಾನ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಹಳೇ ಬಸ್ ನಿಲ್ದಾನವನ್ನು ನವೀಕರಣ ಮಾಡಲು ೫ ಕೋಟಿಗಳ ಅನುದಾನ ಮಂಜೂರು ಮಾಡಲಾಗಿದೆ. ಬಂಗಾರಪೇಟ್, ಕೋಲಾರ ನಗರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಕೋಲಾರ ಚಿಕ್ಕಬಳ್ಳಾಪುರ ರಸ್ತೆ ಪಾದಚಾರಿ ಮಾರ್ಗ ಅಭಿವೃದ್ಧಿಗೆ ೧೨ ಕೋಟಿ ಅನುದಾನ ಒದಗಿಸಲಾಗುವುದು. ಇಂತಹ ವಿಶೇಷ ಅನುದಾನಗಳನ್ನು ಜಿಲ್ಲೆಗೆ ಒದಗಿಸಲಾಗಿದೆ. ಎಂದರು.

ಜಿಲ್ಲೆಯಲ್ಲಿ ಇಲಾಖೆವಾರು ಪ್ರಗತಿಯ ವಿವರಗಳನ್ನು ತಿಳಿಸಿದರು. ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೋಲಾರ ಜಿಲ್ಲೆಯ ಒಂದು ವರ್ಷದ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣ ನವೀಕರಣ, ಕಾಮಗಾರಿ ಉದ್ಘಾಟನೆ, ತೋಟಗಾರಿಕೆ ಇಲಾಖೆಯ ೨೦೦೦ಮೇ. ಟನ್ ಸಾಮರ್ಥ್ಯದ ಶೀತಲ ಗೃಹ ಶಂಕುಸ್ಥಾಪನೆ, ನಿರ್ಮಿತಿ ಕೇಂದ್ರದ ಶಾಲಾ ಕಟ್ಟಡ, ಕೋದಂಡ ರಾಮಸ್ವಾಮಿ ದೇವಸ್ಥಾನ, ಸಾರ್ವಜನಿಕ ಸಂಪರ್ಕ ಕೇಂದ್ರ, ಕಂದಾಯ ನ್ಯಾಯಾಲಯ ಕಟ್ಟಡ, ಅಂಬೇಡ್ಕರ್ ಭವನ, ಅಟಲ್ ಜಿ ಜನಸ್ನೇಹಿ ಕೇಂದ್ರ ಕಟ್ಟಡ, ಕಂದಾಯ ಇಲಾಖೆಯ ೨ ಹೊಸ ನಾಡ ಕಚೇರಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮವೂ ನಡೆಯಿತು.

ಕೋಲಾರ ಜಿಲ್ಲಾ ಶಾಸಕ ಡಾ. ಕೊತ್ತೂರ್ ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಇಂಚರ ಗೋವಿಂದರಾಜು, ಎಂ. ಎಲ್. ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಚಿತ್ರ ೧೫ ಕೆ.ಎಲ್.ಆರ್. ೦೩ ಸ್ವಾತಂತ್ರ‍್ಯ ದಿನದ ಅಂಗವಾಗಿ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ, ಕೋಲಾರ ಜಿಲ್ಲಾ ಶಾಸಕ ಡಾ. ಕೊತ್ತೂರ್ ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು ಮುಂತಾದವರಿದ್ದರು.