ವಿಜಯವಾಣಿ ಸುದ್ದಿಜಾಲ ಕೋಲಾರ
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಕಂಡುಬAದಿಲ್ಲ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಹಾಗೂ ವಲಸೆ ಬರುವವರ ಬಗ್ಗೆ ನಿಗಾವಹಿಸಿ ಎಂದು ತಿಳಿಸಿದರು.
ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಗರ್ಭಿಣಿ ಸ್ತಿçÃಯರು, ಬಾಣಂತಿಯರು, ವೃದ್ದರು, ಮಕ್ಕಳಿಗೆ ಹಾಲುಣಿಸುವ ತಾಯಂದಿರು ಆರೋಗ್ಯದ ಕಡೆ ಹೆಚ್ಚು ಗಮಹರಿಸುವಂತೆ ತಿಳಿಸಿದರು.
ಸಭೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ.ನಾರಾಯಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಶಸ್ತçಚಿಕಿತ್ಸಕ ಡಾ|| ವಿಜಯ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ|| ರಮೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಚಾರಿಣಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದನ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ|| ವಿಜಯ ಕುಮಾರಿ, ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಚಿತ್ರ ೨೬ ಕೆ.ಎಲ್.ಆರ್. ೦೮ : ಜಿಲ್ಲಾಧಿಕಾರಿ ಅಕ್ರಂಪಾಷ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಭಾವಚಿತ್ರ