ನ್ಯೂಸ್

ಕ್ರಿಮಿನಾಶಕ ಮಾತ್ರೆ ಸೇವಿಸಿ ರೈತ ಆತ್ಮಹತ್ಯೆ

ಹಂಪಾಪುರ: ಸಾಲಬಾಧೆಯಿಂದ ಬೇಸತ್ತು ರೈತರೊಬ್ಬರು ಬುಧವಾರ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಎಚ್.ಡಿ.ಕೋಟೆ ತಾಲೂಕು ಹಂಪಾಪುರ ಹೋಬಳಿ ಹಿರೇನಂದಿ ಗ್ರಾಮದ ಕೆಂಡಗಣ್ಣಪ್ಪ (60) ಆತ್ಮಹತ್ಯೆ ಮಾಡಿಕೊಂಡವರು. ತಮಗಿರುವ ಐದು ಎಕರೆ ಜಮೀನಿನಲ್ಲಿ ಭತ್ತ, ರಾಗಿ, ಜೋಳ ಬೆಳೆ ಬೆಳೆದಿದ್ದರು. ವ್ಯವಸಾಯಕ್ಕೆಂದು 8 ಲಕ್ಷ ರೂ.ಗಳನ್ನು ಬ್ಯಾಂಕ್ ಹಾಗೂ ಸಹಕಾರ ಸಂಘಗಳಿಂದ ಪಡೆದಿದ್ದರು. ಸಾಲ ಬಾಧೆಯಿಂದ ಬೇಸತ್ತು ಬುಧವಾರ ಮನೆಯಲ್ಲೇ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಒದ್ದಾಡುತ್ತಿದ್ದರು. ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಕೆಂಡಗಣ್ಣಪ್ಪಗೆ ಇಬ್ಬರು ಪುತ್ರರಿದ್ದಾರೆ. ಎಚ್.ಡಿ.ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.