ನ್ಯೂಸ್

ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ ಕ್ರೀಡಾಪಟುಗಳ ಪ್ರವೇಶಾತಿಗಾಗಿ ವಿಶೇಷ ಆಯ್ಕೆ ಪ್ರಕ್ರಿಯೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಮರು ಆಯ್ಕೆ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಸದರಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವ ಮೈಸೂರು ಜಿಲ್ಲೆಯ ಕ್ರೀಡಾಪಟುಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಏಪ್ರಿಲ್ 15 ರಂದು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಆಥ್ಲೆಟಿಕ್ಸ್, ಬಾಸ್ಕೆಟ್ ಬಾಲ್, ಪೆನ್ಸಿಂಗ್, ವಾಲಿಬಾಲ್ ಮತ್ತು ಆರ್ಚರಿ, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹಾಕಿ, ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಥ್ಲೆಟಿಕ್ಸ್, ಬಾಸ್ಕೆಟ್ ಬಾಲ್, ವಾಲಿಬಾಲ್ ಮತ್ತು ಸೈಕ್ಲಿಂಗ್, ಕಲಬುರ್ಗಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಥ್ಲೆಟಿಕ್ಸ್ ಮತ್ತು ಬಾಲಿಬಾಲ್, ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಮತ್ತು ಕಬಡ್ಡಿ ಕ್ರೀಡೆ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್, ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ಸ್, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ಕ್ರೀಡೆಗಳನ್ನು ಹಾಗೂ ಏಪ್ರಿಲ್ 17 ರಂದು ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬೀದರ್‌ನ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್, ಬಳ್ಳಾರಿ ಜಿಲ್ಲಾ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಫುಟ್‌ಬಾಲ್, ಗದಗ್ ನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಕ್ರೀಡೆಗಳನ್ನು ಆಯೋಜಿಸಲಾಗಿದೆ.

8ನೇ ತರಗತಿಗೆ ಪ್ರವೇಶ ಪಡೆಯಲು ಹಾಗೂ ಪ್ರಥಮ ಪಿ.ಯು.ಸಿ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರುವ ಹಿರಿಯ ವಿಭಾಗದ ಯುವಕ/ಯುವತಿಯರು ಆಯ್ಕೆ ಪ್ರಕ್ರಿಯೆಗೆ ಬರುವಾಗ ಇತ್ತಿಚ್ಛಿನ ಭಾವಚಿತ್ರ, ವೈಧ್ಯಕೀಯ ದೃಢೀಕರಣ ಪತ್ರ ಮತ್ತು ಆಧಾರ್ ಕಾರ್ಡ್ ನ್ನು  ತರುವುದು ಕಡ್ಡಾಯವಾಗಿರುತ್ತದೆ.

 ಈಗಾಗಲೇ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದವರು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಉದ್ದೇಶಿಸಿದ್ದಲ್ಲಿ ಅವರು ಸಹ ಮೇಲ್ಕಂಡ ದಿನಾಂಕಗಳoದು ನಡೆಯಲಿರುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.