ಮೈಸೂರು: ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಪದಕಗಳಿಸಿರುವ ಕ್ರೀಡಾಪಟುಗಳಿಗೆ ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಡಿ.15 ರಂದು ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಅಂದು ಸಂಜೆ 5 ಗಂಟೆಗೆ ನಿವೇದಿತನಗರದ ಸುಬ್ಬರಾವ್ ಉದ್ಯಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಮಟ್ಟದಲ್ಲಿ ಪದಕಗಳಿಸಿರುವ ನಿಶ್ಚಿತ ಪಿ.ಗೌಡ, ಎಚ್.ಸಹಾ, ಆರ್.ಮಾಧುರ್ಯ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.