ನ್ಯೂಸ್

ಕ್ರೀಡೆಯಲ್ಲಿ ಎಸ್‌ಎಂಎಸ್ ಶಾಲೆ ಸಾಧನೆ

ಬೆಟ್ಟದಪುರ : ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಎಂಎಸ್ ಶಾಲೆ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ, ಬಾಲಕಿಯರ ತಂಡ ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ, ಬಾಲಕರ ಮತ್ತು ಬಾಲಕಿಯರ ಖೋ ಖೋ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಓಟ ಮತ್ತು ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದ ಪ್ರಾರ್ಥನಾ ವೈಯಕ್ತಿಕ ಚಾಂಪಿಯನ್ ಪಡೆದಿದ್ದಾಳೆ.
ವಿದ್ಯಾರ್ಥಿಗಳನ್ನು ಶನಿವಾರ ಶಾಲೆಯಲ್ಲಿ ಅಭಿನಂದಿಸಲಾಯಿತು. ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಬಿ.ವಿ ಮಂಜುನಾಥ್, ಕಾರ್ಯದರ್ಶಿ ಎ.ವಿ.ಛಾಯಾ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕ ಎಸ್.ಆರ್.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕ ತಮ್ಮೇಗೌಡ, ಶಿಕ್ಷಕರಾದ ಸ್ವಾಮಿ, ಸೋಮಶೇಖರ್, ಕುಮಾರ್, ಸತೀಶ್, ಸುನೀಲ್, ಅಭಿಲಾಷ್, ಅಶ್ವಿನಿ, ಅನಿತಾ ಇತರರು ಇದ್ದರು.