ನ್ಯೂಸ್

ಕ್ಷಯಮುಕ್ತ ಕೋಲಾರಕ್ಕಾಗಿ ನೂರುದಿನಗಳ ಜಾಗೃತಿ ಅಭಿಯಾನ / ಗ್ರಾಮಪಂಚಾಯ್ತಿ ಮಟ್ಟದಲ್ಲಿ ತಪಾಸಣೆ ನಡೆಸಬೇಕು / ಕ್ಷಯ ಮುಕ್ತ ಕೋಲಾರ ಮಾಡಬೇಕು / ನ್ಯಾ.ಸುನೀಲ್ ಎಸ್.ಹೊಸಮನಿ

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎರಡು ವರ್ಷಗಳಿಂದಲೂ ಸತತ ಪ್ರಯತ್ನ ಮಾಡುತ್ತಿದ್ದೇವೆ. ಆದರೂ ರೋಗಿಗಳು ಕಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಮುಂದಿನ ನೂರು ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯೊಂದಿಗೆ ಸಂಬAಧಿಸಿದ ಇಲಾಖೆಗಳು ಕೂಡ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್. ಹೊಸಮನಿ ಸೂಚಿಸಿದರು.

ಕ್ಷಯರೋಗ (ಟಿಬಿ) ಮುಕ್ತ ಕೋಲಾರ ಜಿಲ್ಲೆಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ಆರೋಗ್ಯದ ಬಗ್ಗೆ ಇರಲಿ ಗಮನ- ಟಿಬಿ ಮುಕ್ತ ಭಾರತ ಅಭಿಯಾನದ ಉದ್ಘಾಟಿಸಿ ಮಾತನಾಡಿದರು.

ತಪಾಸಣೆಗೆ ಬೇಕಾದ ಸಾಧನಗಳ ಸಂಖ್ಯೆಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲಾಗಿದೆ. ಇದನ್ನು ಬಳಸಿಕೊಂಡು ತ್ವರಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಬೇಕು. ರೋಗಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಇದಾಗಿರುವುದರಿಂದ ಚಿಕಿತ್ಸೆ ನೀಡಿ ಹರಡದಂತೆ ನೋಡಿಕೊಳ್ಳ್ಳಬೇಕು. ೩೪ ವಾರಗಳಿಗೂ ಹೆಚ್ಚು ಕಾಲದಿಂದ ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು. ಆದ್ದರಿಂದ ಆರಂಭಿಕ ಹಂತದಲ್ಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಾಯಿಲೆ ಇದ್ದವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಪರೀಕ್ಷೆಯೂ ಉಚಿತವಿದೆ. ರೋಗ ಪತ್ತೆ ಹಚ್ಚುವ ಖಾಸಗಿ ವೈದ್ಯರಿಗೆ ೫೦೦ ಪ್ರೋತ್ಸಾಹಧನ ನೀಡಲಾಗುವುದು. ಚಿಕಿತ್ಸೆಯ ಅವಧಿಯಲ್ಲಿ ಪೌಷ್ಟಿಕ ಆಹಾರಕ್ಕಾಗಿ ತಿಂಗಳಿಗೆ ೧೦೦೦ ರೂ.ಗಳನ್ನು ಕೊಡಲಾಗುವುದು ಎಂದು ಹೇಳಿದರು.

ಸರ್ಕಾರ ನೀಡುವ ಸೌಲಭ್ಯಗಳು ಫಲಾನುಭವಿಗಳಿಗೆ ಸಂಪೂರ್ಣವಾಗಿ ತಲುಪಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು. ಇದಕ್ಕಾಗಿ ಮಾಧ್ಯಮವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಶ್ರೀನಿವಾಸ್ ಮಾತನಾಡಿ, ಕ್ಷಯರೋಗವನ್ನು ಶೂನ್ಯಕ್ಕೆ ತಂದು ದೇಶವನ್ನು ಟಿಬಿ ಮುಕ್ತ ಮಾಡಬೇಕೆಂಬ ಗುರಿ ಹೊಂದಲಾಗಿದೆ. ಈ ನೂರು ದಿನಗಳ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಎರಡು ವರ್ಷಗಳಲ್ಲಿ ಒಂದೂ ಪ್ರಕರಣ ವರದಿ ಆಗದಿದ್ದರೆ, ಆ ಗ್ರಾಮ ಪಂಚಾಯಿತಿಯನ್ನು ಟಿಬಿ ಮುಕ್ತ ಎಂದು ಘೋಷಿಸಲಾಗುವುದು. ಈಗಾಗಲೇ ಪತ್ತೆಯಾದ ಪ್ರದೇಶಗಳಲ್ಲಿ ಚಿಕಿತ್ಸೆ ಪಡೆದವರನ್ನು ಟಿಬಿ ಚಾಂಪಿಯನ್ಸ್ ಎಂದು ಮಾಡಿ ಜಾಗೃತಿ ಮೂಡಿಸಬೇಕು. ಬಿಟ್ಟು ಹೋದವರನ್ನು ಚಿಕಿತ್ಸೆಯ ವ್ಯಾಪ್ತಿಗೆ ತರಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ೧೨೦೨ ಪ್ರಕರಣ ಪತ್ತೆ ಹಚ್ಚಬೇಕು ಎಂದು ಗುರಿ ನೀಡಲಾಗಿದೆ. ೧೦೦ ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ಕಡ್ಡಾಯವಾಗಿ ಭೇಟಿ ನೀಡಿ, ರೋಗಿಗಳನ್ನು ಪತ್ತೆ ಹಚ್ಚಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.

ಒಬ್ಬರಿಂದ ೪೦ ಮಂದಿಗೆ ಹರಡುತ್ತದೆ:

ಜಿಲ್ಲಾ ಕ್ಷಯರೋಗ ನಿವಾರಣಾ ನೋಡಲ್ ಅಧಿಕಾರಿ ಪ್ರಸನ್ನ ಕುಮಾರ್ ಅವರು ಮಾತನಾಡಿ, ಜಾಗತಿಕವಾಗಿ ಹೊರೆಯಾಗುತ್ತಿರುವ ಹಾಗೂ ಜನರನ್ನು ನಲುಗಿಸುವ ಕಾಯಿಲೆಗಳಲ್ಲಿ ಕ್ಷಯ ಮೊದಲ ಸ್ಥಾನದಲ್ಲಿದೆ. ಇದನ್ನು ಹೋಗಲಾಡಿಸಲು ಭಾರತಕ್ಕೆ ಸ್ವಾತಂತ್ರ‍್ಯ ಬಂದಾಗಿನಿAದಲೂ ಪ್ರಯತ್ನ ನಡೆಯುತ್ತಲೇ ಇದೆ. ನರಳಿಸುವ ಹಾಗೂ ರೋಗಿಯೊಬ್ಬರಿಂದ ಸುತ್ತಮುತ್ತಲಿನ ೪೦ ಮಂದಿಗೆ ಹರಡುವ ರೋಗ ಇದಾಗಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಕೆಲವರು ಸ್ವಲ್ಪ ದಿನ ಮಾತ್ರೆ ತೆಗೆದುಕೊಂಡು ಸುಮ್ಮನಾಗುತ್ತಾರೆ. ಇದು ಸರಿಯಲ್ಲ. ಇದರಿಂದ ರೋಗಿ ಗುಣಮುಖವಾಗುವುದಿಲ್ಲ. ಬಹಳ ಸಮಸ್ಯೆಗೆ ಅವರು ಸಿಲುಕಬೇಕಾಗುತ್ತದೆ. ನಿಯಮಿತವಾಗಿ ಮಾತ್ರೆ ಸೇವಿಸುವಂತೆ ಮಾಡುವ ಸವಾಲೂ ನಮ್ಮ ಮುಂದಿದೆ. ಕ್ಷೇತ್ರ ಮಟ್ಟದ ಸಿಬ್ಬಂದಿ ಈ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ನಾರಾಯಣಸ್ವಾಮಿ, ಜಿಲ್ಲಾ ಶಸ್ತçಚಿಕ್ಸಿತೆ ವೈದ್ಯರಾದ ಮಮತ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ಎನ್.ಟಿ.ಇ.ಪಿ.ಬಿ ಸಿಬ್ಬಂದಿಗಳಾದ ಅಮರೇಶ್, ಮದುಕೇಶ್, ಮಹೇಶ್, ವಿನಯಾ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಚಿತ್ರ ೦೭ ಕೆ.ಎಲ್.ಆರ್. ೦೩ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ಆರೋಗ್ಯದ ಬಗ್ಗೆ ಇರಲಿ ಗಮನ- ಟಿಬಿ ಮುಕ್ತ ಭಾರತ ಅಭಿಯಾನದ ಉದ್ಘಾಟಿಸಿ ಮಾತನಾಡಿದ ನ್ಯಾ. ಸುನೀಲ್ ಎಸ್.ಹೊಸಮನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ನಾರಾಯಣಸ್ವಾಮಿ ಮುಂತಾದವರಿದ್ದರು.