ನ್ಯೂಸ್

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಸಿ ನೆಟ್ಟು ಪರಿಸರ ದಿನ ಆಚರಣೆ

ಗುಂಡ್ಲುಪೇಟೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುಂಡ್ಲುಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಗಿಡ ನೆಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಂದೀಶ್ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಾದ ಮಂಜಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಕಾರ್ಯದರ್ಶಿ ನಾಗೇಶ್ ಭಾರತ್ ಸ್ಕೌಟ್ ಗೈಡ್ ತಾಲೂಕು ಸಂಚಾಲಕಿ ಇತರರು ಹಾಜರಿದ್ದರು.