ನ್ಯೂಸ್

ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಅಧಿಕಾರಿಗಳು-ನೌಕರರ ಪ್ರತಿಭಟನೆ

ಮಂಗಳೂರು: ವಿದ್ಯುತ್ ವಿತರಣಾ ಕಂಪೆನಿಗಳ ಖಾಸಗೀರಕಣ ವಿರೋಧಿಸಿ ಸೋಮವಾರ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಅಧಿಕಾರಿಗಳು ಮತ್ತು ನೌಕಕರು ಬಿಜೈನ ಪ್ರಧಾಕ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮಂಗಳೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದಿಂದ ಆಯೋಜಿಸಲಾದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಖಾಸಗೀಕರಣ ನಿರ್ಧಾರವನ್ನು ಖಂಡಿಸಲಾಯಿತು. ಸರ್ಕಾರ ತಕ್ಷಣ ಉದ್ದೇಶಿತ ಖಾಸಗೀಕರಣ ನಿರ್ಧಾರವನ್ನು ಕೈಬಿಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಬಳಿಕ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಮನವಿ ಸಲ್ಲಿಸಲಾಯಿತು. ಇಂಜಿನಿಯರ್‌ಗಳ ಸಂಘದ ಹಿರಿಯ ಉಪಾಧ್ಯಕ್ಷ ಮಂಜಪ್ಪ, ಲೆಕ್ಕಾಧಿಕಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿ ಮುರಳೀದರ ನಾಯಕ್, ನೌಕರರ ಸಂಘದ ಉಪಾಧ್ಯಕ್ಷ ಎಚ್.ಎಸ್.ಗುರುಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.