ವಿಜಯವಾಣಿ ಸುದ್ದಿಜಾಲ ಗದಗ
ಗದಗ ಜಿಲ್ಲಾ„ಕಾರಿಯಾಗಿ ಸಲ್ಲಿಸಿದ ಎರಡು ವರ್ಷಗಳ ಸೇವೆ ಹಾಗೂ ಅನುಭವ ಎಂದಿಗೂ ಮರೆಯಲಾಗದು ಎಂದು ನಿರ್ಗಮಿತ ಜಿಲ್ಲಾ„ಕಾರಿ ಸುಂದರೇಶಬಾಬು ಹೇಳಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಗದಗ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದು ಈ ಎರಡು ವರ್ಷಗಳಲ್ಲಿ ಹೆಚ್ಚಿನ ಸಮಯ ಕೋವಿಡ ನಿರ್ವಹಣೆ, ನೆರೆ ಹಾಗೂ ಚುನಾವಣೆಗಳನ್ನು ಯಶಸ್ವಿಯಾಗಿ ಜರುಗಿಸಲಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮವಾಗಿದ್ದು ಇದರ ಶ್ರೇಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಸಲ್ಲುತ್ತದೆ ಎಂದರು.
ಸರ್ಕಾರಿ ಸೇವೆಗೆ ಬಂದಂತಹ ನಾವುಗಳು ಸಾರ್ವಜನಿಕರಿಗೆ ಸ್ಪಂದಿಸುವದು ನಮ್ಮ ಕರ್ತವ್ಯವಾಗಿದೆ. ಗದಗನಲ್ಲಿ ಕಾರ್ಯನಿರ್ವಹಿಸಿದ್ದು ಸಂತೃಪ್ತಿ ತಂದಿದ್ದು ಇಲ್ಲಿಯ ಅ„ಕಾರಿ ಸಿಬ್ಬಂದಿಗಳು ಒಂದು ಕುಟುಂಬದಂತೆ ನಮಗೆ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಪ್ರಭಾರಿ ಜಿಲ್ಲಾ„ಕಾರಿ ಡಾ.ಸುಶೀಲಾ ಬಿ ಮಾತನಾಡಿ, ಜಿಲ್ಲಾಧಿಕಾರಿ ಸುಂದರೇಶಬಾಬು ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದರು. ಮೃದು ಸ್ವಭಾವಿ, ಮಿತಭಾಷಿಯಾಗಿದ್ದರು. ದಿನಂಪ್ರತಿ ಸಾರ್ವಜನಿಕ ಕುಂದುಕೊರತೆಗಳ ಕುರಿತು ಅ„ಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಮಾರ್ಗದರ್ಶನ ನೀಡುತ್ತಿದ್ದರು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ಸರಳ ಸಜ್ಜನಿಕ ವ್ಯಕ್ತಿತ್ವಕ್ಕೆ ಸುಂದರೇಶ ಬಾಬು ಉತ್ತಮ ಉದಾಹರಣೆಯಾಗಿದ್ದು ಅವರ ಸರಳತನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದರು.ಉಪ ಅರಣ್ಯ ಸಂರಕ್ಷಣಾ„ಕಾರಿ ದೀಪಿಕಾ ಬಾಜಪೇಯಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ, ನಮ್ಮ ಅಧಿಕಾರಾವಧಿಯಲ್ಲಿ ಮನಸ್ಸಿನ ಮೇಲೆ ಪ್ರಭಾವ ಬೀರುವಂತೆ ಕಾರ್ಯ ನಿರ್ವಹಿಸಿದ ಅಧಿಕಾರಿಗಳನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅಂತಹವರ ಸಾಲಿನಲ್ಲಿ ಸುಂದರೇಶ ಬಾಬು ಒಬ್ಬರು ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರರು, ಜಂಟಿ ಕೃಷಿ ನಿರ್ದೇಶಕರು, ವಿವಿಧ ಇಲಾಖೆಗಳ ಅ„ಕಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸುಂದರೇಶಬಾಬು ದಂಪತಿಯನ್ನು ಸನ್ಮಾನಿಸಲಾಯಿತು.
ಮುಂಡರಗಿ ತಹಸೀಲ್ದಾರ ಆಶಪ್ಪ ಪೂಜಾರ ಅವರು ನಿರ್ಗಮಿತ ಜಿಲ್ಲಾ„ಕಾರಿ ಸುಂದರೇಶ ಬಾಬು ಕುರಿತು ರಚಿಸಿದ ಕವನವನ್ನು ನಯನಾ ಅಳವಂಡಿ ಹಾಡಿದರು.