ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಎಸ್‌ಡಿಪಿಐ ಮತ್ತು ಪಿಎ್ಐ ಕಚೇರಿಗಳ ಮೇಲೆ ದಾಳಿ ನಡೆಸಿ ಮಾರಕಾಸಗಳನ್ನು ಜಪ್ತಿ ಮಾಡಿದೆ. ಈ ಹಿಂದೆಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.
ಆ.11ರ ರಾತ್ರಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮತ್ತು ಗಲಭೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಬುಧವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ (ಎಸ್‌ಡಿಪಿಐ) ಮತ್ತು ಪಾಪ್ಯುಲರ್ ್ರಂಟ್ ಆ್ ಇಂಡಿಯಾ(ಪಿಎ್ಐ)ಗೆ ಸೇರಿದ 4 ಕಚೇರಿಗಳು ಸೇರಿದಂತೆ ನಗರದ 43 ಕಡೆಗಳಲ್ಲಿ ದಾಳಿ ನಡೆಸಿ ಶೋಧ ನಡೆಸಲಾಯಿತು. ಕತ್ತಿ, ಚಾಕು, ರಾಡು ಸೇರಿದಂತೆ ಹಲವು ಮಾರಕಾಸಗಳು ಪತ್ತೆಯಾಗಿವೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹೋದರ ಸಂಬಂಧಿ ನವೀನ್ ೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದ ವಿವಾದಾತ್ಮಕ ೆಸ್ಟ್ ವಿರೋಧಿಸಿ ಕಿಡಿಗೇಡಿಗಳು ಗಲಭೆ ನಡೆಸಿದ್ದರು. ಮಾರಕಾಸ ಮತ್ತು ಶಸ ಸಜ್ಜಿತವಾಗಿ ಪೊಲೀಸರ ಮೇಲೆ ದಾಳಿ ನಡೆಸಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆಗಳಿಗೆ ಬೆಂಕಿ ಹಚ್ಚಿದ್ದರು. ಜನರ ಮತ್ತು ಖಾಸಗಿ ವಾಹನಗಳಿಗೆ ಹಾನಿ ಮಾಡಿದ್ದರು. ಸರ್ಕಾರಿ ಮತ್ತು ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದ್ದರು. ಈ ಪ್ರಕರಣದ ತನಿಖೆ ಕೈಗೊಂಡಿದ್ದು, ಇಲ್ಲಿಯವರೆಗೂ ಗಲಭೆ ಸಂಬಂಧ ಡಿಜೆ ಹಳ್ಳಿ ಠಾಣೆ ಪ್ರಕರಣದಲ್ಲಿ 124 ಮತ್ತು ಕೆಜಿ ಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ 169 ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಎಸ್‌ಡಿಪಿಐ ಮತ್ತು ಪಿಎ್ಐಗೆ ಸೇರಿ ಕಾರ್ಯಕರ್ತರು ಮತ್ತು ಮುಖಂಡರು ಸೇರಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರೆದಿರುವುದಾಗಿ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.