ಗುಂಡ್ಲುಪೇಟೆ: ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕೇರಳ ಮತ್ತು ತಮಿಳುನಾಡು ಗಡಿಯನ್ನು ಬಂದ್ ಮಾಡಬೇಕೆಂದು ರೈತರು ಬಿ.ಬಿ.ಕಾವೇರಿ ಅವರನ್ನು ಒತ್ತಾಯಿಸಿದರು.
ಜಿಲ್ಲಾ ಹಸಿರು ಸೇನೆ ಸಂಚಾಲಕ ಕಡಬೂರು ಮಂಜುನಾಥ ಮಾತನಾಡಿ, ಕೇರಳ ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವನ ಕರೊನಾ ಭೀತಿ ತಾಲೂಕಿಗೂ ಆವರಿಸಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಕೇರಳ ಹಿತ ಕಾಯುತ್ತಿದೆ. ಅದಕ್ಕಾಗಿ ಗಡಿ ಬಂದ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಮನವಿಯನ್ನು ಆಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು. ತಹಸೀಲ್ದಾರ್ ನಂಜುಂಡಯ್ಯ, ಮುಖ್ಯಾಧಿಕಾರಿ ರಮೇಶ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಇತರರಿದ್ದರು.