ಹಲಗನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ದಿನೇಶ್,ಪುಟ್ಟಸ್ವಾಮಿ, ಲೋಕೇಶ್, ಶಿವರಾಜ್, ಪ್ರಕಾಶ್, ಸುಮಿತ್ರಾ ಇದ್ದರು. 
ನ್ಯೂಸ್

ಗುಣಾತ್ಮಕ ಶಿಕ್ಷಣ ಪಡೆದು ಮಕ್ಕಳು ಉತ್ತಮ ಪ್ರಜೆಗಳಾಗಲಿ

ಬೆಟ್ಟದಪುರ: ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹಲಗನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ದಿನೇಶ್ ಸಲಹೆ ನೀಡಿದರು.

ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ವಿದ್ಯಾರ್ಥಿಗಳು ದುಶ್ವಟಗಳತ್ತ ಹೆಚ್ಚು ಆಕರ್ಷಣೆಯಾಗುತ್ತಿದ್ದು, ಇದರಿಂದ ಶಿಕ್ಷಣ ಕುಂಠಿತಗೊಳ್ಳುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಹಾಗಾಗಿ ಶಿಕ್ಷಣ ಪಡೆಯುವತ್ತ ಹೆಚ್ಚು ಗಮನಹರಿಸಬೇಕು ಎಂದರು.

ಉಪನ್ಯಾಸಕರಾದ ಪುಟ್ಟಸ್ವಾಮಿ, ಲೋಕೇಶ್, ಶಿವರಾಜ್, ಪ್ರಕಾಶ್, ಸುಮಿತ್ರಾ ಇದ್ದರು.