ಸಾಗರ: ತಾಲೂಕಿನ ತ್ಯಾಗರ್ತಿಯಲ್ಲಿ ಗೋಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಗೋಹತ್ಯೆಯನ್ನು ವಿರೋಧಿಸಿದ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣ ರದ್ದುಪಡಿಸುವಂತೆ ಒತ್ತಾಯಿಸಿ ಮಂಗಳವಾರ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿಎಚ್‌ಪಿ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಮಾತನಾಡಿ, ಗೋಹತ್ಯೆ ಮೂಲಕ ಹಿಂದುಗಳ ಭಾವನೆಗೆ ಘಾಸಿಗೊಳಿಸುವ ಕೆಲಸ ಮಾಡಲಾಗುತ್ತಿದೆ. ದಿನೇದಿನೆ ಗೋವಿನ ಸಂತತಿ ಕಡಿಮೆಯಾಗುತ್ತಿದೆ. ತ್ಯಾಗರ್ತಿಯಲ್ಲಿ ಗೋಹತ್ಯೆ ವಿರುದ್ಧ ಮಾತನಾಡಿದ ಪರಿವಾರದ ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗಿದೆ. ನ್ಯಾಯಕ್ಕಾಗಿ ಧ್ವನಿ ಎತ್ತಿದವರ ವಿರುದ್ಧ ಹಾಕಿರುವ ಪ್ರಕರಣ ಹಿಂಪಡೆಯಬೇಕು. ತಾಲೂಕಿನಲ್ಲಿ ನಡೆಯುತ್ತಿರುವ ಗೋಹತ್ಯೆ ತಡೆಯದಿದ್ದರೆ ಸಾಗರ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಬಜರಂಗ ದಳದ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ, ಸುನೀಲ್, ವಕೀಲ ಕೆ.ವಿ.ಪ್ರವೀಣ್, ಸುದರ್ಶನ, ನಗರಸಭಾ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಟಿ.ಡಿ.ಮೇಘರಾಜ್‌ಮಧುರಾ ಶಿವಾನಂದ್ ಇತರರಿದ್ದರು.