ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರ ಕಿವಿಗೆ ಹೂ ಮುಡಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ವಿದ್ಯುತ್ ಇಲಾಖೆಗೆ ಹಣ ಡೆಪಾಸಿಟ್ ಮಾಡದ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದ ಒಂದೇ ಒಂದು ಗ್ಯಾರಂಟಿ ಯೋಜನೆಯೂ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಸುಮ್ಮನೆ ಗ್ಯಾರಂಟಿ ಎಂದು ಓಡಾಡುತ್ತಿದ್ದಾರೆ. ಕೆಎಸ್‌ಆರ್‌ಟಿಸಿಯನ್ನು ಹಾಳು ಮಾಡಿದ್ದಾರೆ. ಇದೀಗ ವಿದ್ಯುತ್ ನಿಗಮಗಳನ್ನು ಹಾಳು ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು.