ನ್ಯೂಸ್

ಗ್ರಂಥಾಲಯ ಉದ್ಘಾಟನಾ ಸಮಾರಂಭ

ಲಯನ್ಸ್ ಕ್ಲಬ್ ಆಫ್ ಮೈಸೂರು ನಿಸರ್ಗದ ವತಿಯಿಂದ ದತ್ತು ಪಡೆದಿರುವ ಮಂಡಕಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಶೌಚಗೃಹ ಕಟ್ಟಡ ಹಾಗೂ ಗ್ರಂಥಾಲಯ ಉದ್ಘಾಟನಾ ಸಮಾರಂಭ ಅ.25ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ಅಧ್ಯಕ್ಷ ಎಸ್.ಮೂರ್ತಿ ತಿಳಿಸಿದರು.

ಕ್ಯಾನ್‌ಫಿನ್ ಹೋಮ್ಸ್ ಸಿಎಸ್‌ಆರ್ ನಿಧಿಯೊಡನೆ ಕಟ್ಟಡ ನಿರ್ಮಿಸಲಾಗಿದೆ. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮುಖಂಡರಾದ ಕೆ.ಎನ್.ಶಾಮರಾವ್, ಕೆ.ಎಲ್.ರಾಜಶೇಖರ್, ಜಯಕುಮಾರ್, ಜಯರಾಮು, ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅ.26 ರಂದು ಬೆಳಗ್ಗೆ 11.30ಕ್ಕೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಇರಲಿದೆ. ಡಾ.ಪುಷ್ಪವತಿ, ಪ್ರಶಾಂತ್ ಜೋಶಿ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.