ಶಿಕಾರಿಪುರ: ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಮೂಲಕ ಸಚಿವ ಮಧು ಬಂಗಾರಪ್ಪ ಹೊಸ ಇತಿಹಾಸ ಬರೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದರ್ಶನ್ ಉಳ್ಳಿ ಹೇಳಿದರು.
ಮಧು ಬಂಗಾರಪ್ಪ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಮತ್ತು ಪುಸ್ತಕಗಳ ಮಹತ್ವ ತಿಳಿಸಲು ರಾಜ್ಯದ 25,347 ಶಾಲೆಗಳ ಗ್ರಂಥಾಲಯಕ್ಕಾಗಿ 20 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. 2023-24ರಲ್ಲಿ 13,000 ಶಿಕ್ಷಕರ ನೇಮಕಾತಿ ಹಾಗೂ 43,000 ಅತಿಥಿ ಶಿಕ್ಷಕರ ನೇಮಕ ಮಾಡಿದ್ದಾರೆ. ಪಬ್ಲಿಕ್ ಪರೀಕ್ಷೆಗಳಲ್ಲಿ ೇಲಾದ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಲು ಮತ್ತು ಪಾಲಕರಿಗೆ ಆರ್ಥಿಕ ಹೊರೆ ತಪ್ಪಿಸಲು ಎರಡು ಸಪ್ಲಿಮೆಂಟರಿಗಳನ್ನು ತಂದಿರುವುದು ಶ್ಲಾಘನೀಯ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
5 ವಷರ್ 5 ತಿಂಗಳು ತುಂಬಿದ ಮಕ್ಕಳಿಗೆ ಶಾಲಾ ಹಾಜರಾತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯಡಿಯಲ್ಲಿ ಹಳೆಯ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ತಾವು ಅಕ್ಷರ ಕಲಿತ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ಅವಕಾಶ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಶ್ಲಾಸಿದರು.
ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 2,500 ಕೋಟಿ ರೂ.ಅನುದಾನ ತಂದು 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ರಾಜ್ಯದಲ್ಲಿ ತೆರೆಯಲು ಮುಂದಾಗಿದ್ದಾರೆ. ಮಕ್ಕಳ ಪೌಷ್ಟಿಕತೆಯ ದೃಷ್ಟಿಯಿಂದ ವಿಪ್ರೋ ಸಂಸ್ಥೆಯಿಂದ 1591 ಕೋಟಿ ರೂ. ಅನುದಾನವನ್ನು ತಂದು ಮೊಟ್ಟೆ, ನಂದಿನಿ ಹಾಲು, ರಾಗಿ ಮಾಲ್ಟ್ ನೀಡುವ ಮೂಲಕ ಮಕ್ಕಳ ಉತ್ತಮ ಹಾಜರಾತಿಗೆ ಪ್ರಯತ್ನ ಮಾಡಿದ್ದಾರೆ ಎಂದು ಬಣ್ಣಿಸಿದರು. ಕೆಡಿಪಿ ಸದಸ್ಯ ರಾಘವೇಂದ್ರ ನಾಯಕ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಮಂಜುನಾಯ್ಕ, ಚರಣ್ ಬನ್ನೂರು, ರವಿಕುಮಾರ್, ಗುತ್ಯಪ್ಪ ಚನ್ನಳ್ಳಿ, ಇತರರಿದ್ದರು.