ತಿ.ನರಸೀಪುರ : ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅತ್ಯಧಿಕ ಮತ ಪಡೆದು ಜಯಗಳಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಉಕ್ಕಲಗೆರೆ ಬಸವಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಡಾ.ಎಚ್.ಸಿ.ಮಹದೇವಪ್ಪ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅವರ ನಾಯಕತ್ವ ಇಲ್ಲದಿದ್ದರೆ ಯಾವುದೇ ಅಭಿವೃದ್ಧಿ ಕೆಲಸ ಮಾಡಲಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ನೀಡಿದ್ದ ಗ್ಯಾರಂಟಿ ಭರವಸೆಯನ್ನು ಈಡೇರಿಸಿದೆ. ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚಿದರವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚಿಕ್ಕಣ್ಣ, ಚಿಕ್ಕ ಲಕ್ಷ್ಮೀಪುರ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಂಗಸ್ವಾಮಿ, ಮುಸುವಿನ ಕೊಪ್ಪಲು ಮಹದೇವಣ್ಣ, ಷಡಕ್ಷರಿ ಇತರರು ಇದ್ದರು.