ನ್ಯೂಸ್

ಚಾಮುಂಡಿಬೆಟ್ಟದಲ್ಲಿ ಸಪ್ತಪದಿ ತುಳಿದ 16 ಜೋಡಿ

ಮೈಸೂರು: ಮುಜರಾಯಿ ಇಲಾಖೆಯಿಂದ ಚಾಮುಂಡಿ ಬೆಟ್ಟದಲ್ಲಿ ಸೋಮವಾರದ ಆಯೋಜಿಸಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 16 ಜೋಡಿಗಳು‌ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಮ್ , ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮೈಲ್ಯಾಕ್ ಅಧ್ಯಕ್ಷ ಫಣೀಶ್ ಇತರರು ನವ ವಧುವರರನ್ನು ಆಶೀರ್ವಾದಿಸಿದರು