ವಿಜಯವಾಣಿ ಸುದ್ದಿಜಾಲ ಕೋಲಾರ
ರಸ್ತೆಯಲ್ಲಿ ವಾಹನ ಚಾಲನೆ ಮಾಡಲು ಮನುಷ್ಯನಿಗೆ ಕಣ್ಣಿನ ದೃಷ್ಟಿ ಅತಿ ಮುಖ್ಯವಾದುದು. ಅದಕ್ಕಾಗಿ ಚಾಲನಾ ಪರವಾನಗಿ ಪಡೆಯಲು ಬಂದAತಹ ಸಾರ್ವಜನಿಕರಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಉಚಿತ ನೇತ್ರದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಆರ್.ಟಿ.ಓ ವೇಣುಗೋಪಾಲ್ ರೆಡ್ಡಿ ತಿಳಿಸಿದರು.
ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಅಭಿಯಂತರರ ಕಛೇರಿಯಲ್ಲಿ ೩೬ನೇ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ನೇತೃತ್ವದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಚಾಲಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಿದರೆ ರಸ್ತೆಗಳಲ್ಲಿ ಅಪಘಾತಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಅದಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರೂ ಜಾಗರೂಕರಾಗಬೇಕು. ಮನುಷ್ಯನಿಗೆ ತನ್ನ ಜೀವಕ್ಕಿಂತ ಮಿಗಿಲಾದುದು ಬೇರೆ ಯಾವುದೂ ಇಲ್ಲ. ಅದಕ್ಕಾಗಿ ಜೀವ ಉಳಿಸಲು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದರು.
ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕರುಗಳಾದ ಗುರುಪ್ರಸಾದ್, ಪುಷ್ಪಲತಾ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಗೋಪಿಕೃಷ್ಣ, ಗೋಪಾಲಕೃಷ್ಣ ಹಾಗು ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಚಿತ್ರ ೩೦ ಕೆ.ಎಲ್.ಆರ್. ೦೩ : ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಅಭಿಯಂತರರ ಕಛೇರಿಯಲ್ಲಿ ೩೬ನೇ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ನೇತೃತ್ವದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಆರ್.ಟಿ.ಓ ವೇಣುಗೋಪಾಲ್ ರೆಡ್ಡಿ.