ವಿಜಯವಾಣಿ ಸುದ್ದಿಜಾಲ ಕೋಲಾರ
ಜಾತಿಗಣತಿಗಾಗಿ ಶಿಕ್ಷಕರನ್ನು ನಿಯೋಜನೆ ಮಾಡುವುದು ಜಿಲ್ಲಾಡಳಿತ ಯಡವಟ್ಟು ಮಾಡಿದ್ದು, ಅಂಗವಿಕಲರು, ಹಿರಿಯರು, ಅನಾರೋಗ್ಯ ಪೀಡಿತರು ಮತ್ತು ಗರ್ಭಿಣಿ ಶಿಕ್ಷಕರನ್ನು ನಿಯೋಜನೆ ಮಾಡಿರುವ ಶಿಕ್ಷಣ ಮತ್ತು ಕಂದಾಯ ಇಲಾಖೆಯ ವಿರುದ್ಧ ಶಿಕ್ಷಣ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದು, ಸರಿಪಡಿಸುವಂತೆ ಒತ್ತಾಯಿಸಿ ಮಂಗಳವಾರ ಅಪರಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಪಡಿಸಿದರು.
ಕೋಲಾರ ಜಿಲ್ಲೆಯಲ್ಲಿ ಸಮೀಕ್ಷೆಗಾಗಿ ನೇಮಕ ಮಾಡಿರುವ ಶಿಕ್ಷಕರ ಪೈಕಿ ಗರ್ಭಿಣಿ ಸ್ತಿçÃಯರು ಸೇರಿದಂತೆ ದೀರ್ಘಕಾಲದ ಅನಾರೋಗ್ಯ ಪೀಡಿತ ಶಿಕ್ಷಕರು ಮತ್ತು ಅಂಗವಿಕಲ ಹಾಗೂ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರನ್ನು ನಿಯೋಜನೆ ಮಾಡಿರುವುದರಿಂದ ಅನೇಕ ಶಿಕ್ಷಕರು ಜಾತಿ ಸಮೀಕ್ಷೆಗೆ ಹಾಜರಾಗದೆ ಅಸಮಾಧಾನವನ್ನು ಹೊರಹಾಕಿದ್ದು, ಶಿಕ್ಷಕ ಮುಖಂಡರ ಮತ್ತು ಸಂಘಟನೆಗಳಿಗೆ ಮೊರೆ ಹೋಗಿದ್ದಾರೆ.
ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಂ.ಆರ್.ರವಿಯನ್ನು ಭೇಟಿಯಾದ ಸಂಘಟನೆಯ ಪದಾಧಿಕಾರಿಗಳು ಸಮೀಕ್ಷೆಗೆ ನಿಯೋಜನೆ ಮಾಡಿರುವ ಯಡವಟ್ಟುಗಳ ಬಗ್ಗೆ ಮನವಿ ಮಾಡಿದ್ದು, ಇದನ್ನು ಸರಿಪಡಿಸುವಂತೆ ಅಪರ ಜಿಲ್ಲಾಧಿಕಾರಿ ಮಂಗಳಾ ರವರನ್ನು ಭೇಟಿ ಮಾಡುವಂತೆ ಸೂಚನೆ ನೀಡಿದರು.
ಶಿಕ್ಷಕರ ಸಂಘಟನೆಯಿAದ ಮುಖಂಡರು ಅಪರ ಜಿಲ್ಲಾಧಿಕಾರಿ ಮಂಗಳ ರವರಿಗೆ ದೂರು ನೀಡಿ, ಆಗಿರುವ ಲೋಪಗಳನ್ನು ಸರಿಪಡಿಸಬೇಕು ಮತ್ತು ಶ್ರೀನಿವಾಸಪುರ ತಾಲ್ಲೂಕಿನಿಂದ ೪೫ ಶಿಕ್ಷಕರನ್ನು, ಮುಳಬಾಗಲು ತಾಲ್ಲೂಕಿನಿಂದ ೭೫ ಶಿಕ್ಷಕರನ್ನು, ಕೆ.ಜಿ.ಎಫ್. ಮತ್ತು ಬಂಗಾರಪೇಟೆ ತಾಲ್ಲೂಕುಗಳಲ್ಲಿ ನಿಯೋಜನೆ ಮಾಡಿದ್ದಾರೆ. ೧೦೦ ಕಿ.ಮೀ ರಷ್ಟು ದೂರವಿರುವ ಈ ಸ್ಥಳಗಳಿಗೆ ಶಿಕ್ಷಕರು ಹೋಗಲು ಸಾಧ್ಯವಾಗುತ್ತಿಲ್ಲ. ಹಾಗೂ ದೂರದ ಗಡಿಭಾಗದ ಗ್ರಾಮಗಳಿಗೂ ಶಿಕ್ಷಕರನ್ನು ನಿಯೋಜನೆ ಮಾಡಿದ್ದಾರೆ. ಇದನ್ನು ಸರಿಪಡಿಸಿಕೊಡಬೇಕೆಂದು ಮನವಿ ಮಾಡಿದರು.
ಮನವಿಗೆ ಸ್ಪಂಧಿಸಿದ ಅಪರ ಜಿಲ್ಲಾಧಿಕಾರಿ ಮಂಗಳಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿಕೊಂಡು ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಸಮೀಕ್ಷೆ ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಶಿಕ್ಷಕರನ್ನು ಅದಲು ಬದಲು ಮಾಡುವ ಕೆಲಸ ಮಾಡಬೇಕು ಹಾಗೂ ಸಮೀಕ್ಷೆ ಮಾಡಲು ಆಗದಂತಹ ಶಿಕ್ಷಕರನ್ನು ಕೈಬಿಡಬೇಕೆಂದು ಸೂಚನೆ ನೀಡಿರುವುದಾಗಿ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ತಿಳಿಸಿದ್ದಾರೆ.
ವಿದೇಶ ಪ್ರವಾಸ ಕೈಗೊಂಡ ಶಿಕ್ಷಕರು :
ದಸರಾ ರಜೆಗಳಲ್ಲಿ ವಿದೇಶ ಪ್ರವಾಸ ಕೈಗೊಳ್ಳುವ ಜಿಲ್ಲೆಯಾದ್ಯಂತ ೪೦ಕ್ಕೂ ಹೆಚ್ಚು ಶಿಕ್ಷಕರು ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರನ್ನೂ ಸಹ ಸಮೀಕ್ಷೆ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದು, ಈಗ ಆ ಶಿಕ್ಷಕರು ಸಮೀಕ್ಷೆ ಕಾರ್ಯದಿಂದ ದೂರ ಉಳಿಯುವಂತೆ ಆಗಿದೆ. ಈ ಸ್ಥಳಗಳಲ್ಲಿ ಬೇರೆ ಶಿಕ್ಷಕರನ್ನು ನಿಯೋಜನೆ ಮಾಡಬೇಕೆಂದು ಶಿಕ್ಷಣ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.
ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅಪ್ಪಯ್ಯಗೌಡ, ಜಿಲ್ಲಾ ಉಪಾಧ್ಯಕ್ಷ ಓಬಳರೆಡ್ಡಿ, ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬೈರೇಗೌಡ, ಮುಳಬಾಗಲು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಗಿರಿಯಪ್ಪ, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ರಘುನಾಥ್‌ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
ಚಿತ್ರ ೨೩ ಕೆ.ಎಲ್.ಆರ್. ೦೩ : ಜಾತಿ ಸಮೀಕ್ಷೆಗೆ ಶಿಕ್ಷಕರ ನಿಯೋಜನೆಯಲ್ಲಿ ಆಗಿರುವ ಯಡವಟ್ಟನ್ನು ಸರಿಪಡಿಸುವಂತೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳಾ ರವರಿಗೆ ಮನವಿ ಸಲ್ಲಿಸಿದರು.