ನ್ಯೂಸ್

ಜಾನಪದ ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಸಮೂಹದ ಮೇಲಿದೆ / ವಿ.ಮನೋಹರ್

ವಿಜಯವಾಣಿ ಸುದ್ದಿಜಾಲ ಕೋಲಾರ
ಪ್ರಸ್ತುತ ಸನ್ನಿವೇಶದಲ್ಲಿ ಜಾನಪದ ಕಲೆಯು ಅಳಿವಿನಂಚಿನಲ್ಲಿದೆ. ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಯುವ ಸಮೂಹದ ಮೇಲೆ ಇದ್ದು, ಕಲೆಗೆ ಹೆಚ್ಚಿನ ಪೋತ್ಸಾಹವು ಅಗತ್ಯವಿದೆ ಎಂದು ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ.ಮಹೋಹರ್ ತಿಳಿಸಿದರು.

ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಭಾನುವಾರ ರಾತ್ರಿ ಜಗ್ಗಣ್ಣಕ್ಕ ಸಂಗೀತ ಸುಗ್ಗಿಯ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಿಂದೆ ನಮ್ಮ ಪೂರ್ವಜರು ನಡೆಸಿಕೊಂಡು ಬರತ್ತಿದ್ದ ಕಲೆಗಳು ಜಾಗತೀಕರಣ ಪ್ರಭಾವದಿಂದ ದೂರ ಸರಿಯುತ್ತಿವೆ. ಇಂದಿನ ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ತಿಳಿಸಿಕೊಟ್ಟು ಜಾನಪದ ಸಾಹಿತ್ಯವನ್ನು ಮತ್ತು ಕಲೆಯನ್ನು ಉಳಿಸುವ ಪ್ರಯತ್ನಗಳು ಮಾಡಬೇಕು ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಮಾತನಾಡಿ, ದೇಶೀಯ ಕಲೆಯನ್ನು ಪರಿಚಯಿಸುವ ಪ್ರಯತ್ನವಾಗಿದ್ದು, ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಸಾಂಸ್ಕೃತಿಕ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ಉತ್ತೇಜಿಸಬೇಕು. ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಜೊತೆಗೆ ನಮ್ಮ ಸಂಸ್ಕೃತಿಯೊAದಿಗೆ ಭಾಷೆಯನ್ನು ಉಳಿಸುವುದು ಮುಖ್ಯವಾಗಿದೆ. ಪ್ರತಿಯೊಬ್ಬರಲ್ಲೂ ಒಂದೊAದು ಪ್ರತಿಭೆ ಅಡಕವಾಗಿರುತ್ತದೆ, ಅದನ್ನು ಗುರುತಿಸಿ, ಪ್ರೋತ್ಸಾಹಿಸಿದಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮತ್ತು ಯುವಕರಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ ಎಂದರು.

ಕಾರ್ಯಕ್ರಮದ ಆಯೋಜಕ ಹಾಗೂ ಜಾನಪದ ಗಾಯಕ ಗೋ.ನಾ ಸ್ವಾಮಿ ಮಾತನಾಡಿ, ಸಿನಿಮಾದ ಮಾಯಾಲೋಕದಲ್ಲಿ ದೇಶೀಯ ಜಾನಪದ ಕಲೆಗಳು ದೂರವಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮೈಕ್ ಮುಟ್ಟದ ಕಲಾವಿದರನ್ನು ಗುರುತಿಸಿ ಬೆಳೆಸುವ ಉದ್ದೇಶವಾಗಿದೆ. ಸ್ಥಳೀಯವಾದ ಕಲೆ ಸಂಸ್ಕೃತಿಗೆ ಚಪ್ಪಾಳೆ ಹೊಡೆದು ಅವರಿಗೂ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುAದಿನ ವರ್ಷ ಜನವರಿಯಲ್ಲಿ ಪ್ರಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ೨೦ ಲಕ್ಷ ಮೊತ್ತದ ವಿಶ್ವ ಕನ್ನಡ ಜಾನಪದ ಗಾಯನ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿದರು.

ಜಗ್ಗಣ್ಣಕ್ಕ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನಗಳನ್ನು ವಿತರಿಸಿದರು. ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಮುನಿರಾಜು, ಜಾನಪದ ಒಕ್ಕೂಟದ ಅಧ್ಯಕ್ಷ ನಾಗರಾಜ್, ನಾರಾಯಣಗೌಡ, ಆರ್.ಅಶೋಕ್, ಬೈರೇಗೌಡ, ನಿರೂಪಕಿ ಅಕ್ಷಿತಾ ಮುಂತಾದವರು ಇದ್ದರು.

ಚಿತ್ರ ೧೪ ಕೆ.ಎಲ್.ಆರ್. ೦೧ : ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಭಾನುವಾರ ರಾತ್ರಿ ಜಗ್ಗಣ್ಣಕ್ಕ ಸಂಗೀತ ಸುಗ್ಗಿಯ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ.ಮಹೋಹರ್, ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಮುಂತಾದವರಿದ್ದರು.