ನ್ಯೂಸ್

ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ

ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಪಶು ಸಂಗೋಪನಾ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸೋಮಯ್ಯ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಡಾ.ಹರ್ಷಿತಾ, ಶಿವರಾಜ್, ಆಶೋಕ್ ಇದ್ದರು.

ಬೆಟ್ಟದಪುರ: ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾಲುಬಾಯಿ ಜ್ವರ ಲಸಿಕಾ ಅಭಿಯಾನವನ್ನು ಪಶು ಸಂಗೋಪನಾ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸೋಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.


ನಂತರ ಮಾತನಾಡಿ, ತಾಲೂಕಿನಲ್ಲಿ 85 ಸಾವಿರ ರಾಸುಗಳಿದ್ದು, ಅದರಲ್ಲಿ ನಾಲ್ಕು ಸಾವಿರ ಎಮ್ಮೆಗಳು ಇವೆ. ಒಟ್ಟು 64 ಲಸಿಕೆದಾರರಿದ್ದು, 32 ತಂಡಗಳನ್ನು ರಚಿಸಿಕೊಂಡು ತಾಲೂಕಿನಾದ್ಯಂತ ಲಸಿಕೆ ಹಾಕಲಾಗುತ್ತಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಮಾಹಿತಿ ನೀಡಿದರು.

ಪಶು ವೈದ್ಯಾಧಿಕಾರಿ ಡಾ.ಹರ್ಷಿತಾ, ಲಸಿಕೆದಾರರಾದ ಶಿವರಾಜ್, ಆಶೋಕ್ ಇದ್ದರು.