ನ್ಯೂಸ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಸಮಾರಂಭ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಸೆಪ್ಟೆಂಬರ್ 06 ರಂದು ಬೆಳಗ್ಗೆ 10.00 ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅವರ ಘನ ಉಪಸ್ಥಿತಿಯಲ್ಲಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

 ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್, ಅವರು ಭಾಗವಹಿಸುವರು.