ಹನೂರು: ಸಮೀಪದ ಮಂಗಲ ಬಳಿಯ ಹುಲುಸುಗುಡ್ಡೆಯಲ್ಲಿನ ಜೀವರಾಜ್ ಎಜುಕೇಷನಲ್ ಟ್ರಸ್ಟ್‌ನ ರಿಪಬ್ಲಿಕ್ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಅ.28ರಂದು ಕ್ರೀಡೆ, ಸಾಂಸ್ಕೃತಿಕ ಕ್ಲಬ್ ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಾಸಕ ಅರ್.ನರೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಮಾಜಿ ಶಾಸಕ ಎಸ್.ಬಾಲರಾಜು, ಬೆಂಗಳೂರಿನ ಎಸ್ಪಿ ಸಿ.ಗೋಪಾಲ್, ಚಾ.ನಗರ ವೈದ್ಯಾಧಿಕಾರಿ ಡಾ.ಮಹೇಶ್, ಟ್ರಸ್ಟ್ ಅಧ್ಯಕ್ಷೆ ಜಯಲಕ್ಷ್ಮೀ ಜೀವರಾಜ್ ಇತರರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.