ವಿಜಯವಾಣಿ ಸುದ್ದಿಜಾಲ ಕೋಲಾರ
ಕನ್ನಡ ರಾಜ್ಯೋತ್ಸವ ಅಂತಹ ವಿಶೇಷ ಸಂದರ್ಭಗಳಲ್ಲಿ ಸಾರ್ವಜನಿಕರು ದೇವಸ್ಥಾನಗಳನ್ನು ವೀಕ್ಷಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಒಂದು ದಿನದ ಟೂರ್ ಪ್ಯಾಕೇಜ್‌ಗೆ ಬಸ್ಸುಗಳ ವ್ಯವಸ್ಥೆ ಮಾಡಿಸಲು ಕ್ರಮ ವಹಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.
ನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಶನಿವಾರ ಆಚರಿಸಲಾದ ೭೦ ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಜಿಲ್ಲೆಯ ಪ್ರವಾಸಿತಾಣಗಳ ವೀಕ್ಷಿಸಲು ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕ್ಷೇತ್ರಗಳ ವೀಕ್ಷಣೆಗೆ ಮಾತ್ರವೇ ಒಂದು ದಿನದ ಟೂರ್ ಪ್ಯಾಕೇಜ್‌ಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು. ಹೇಗೆ ಮಾಡಿದರೆ ಸೂಕ್ತವಾಗುತ್ತದೆ ಎಂಬುದರ ಬಗ್ಗೆ ರೂಪರೇಷೆಗಳನ್ನು ತಯಾರಿಸಿಕೊಳ್ಳುವಂತೆ ತಿಳಿಸಿದರು.
ಕನ್ನಡ ರಾಜ್ಯೋತ್ಸವವು ನಾಡಿನ ಹಬ್ಬವಾಗಿದೆ. ಕನ್ನಡ ಭಾಷೆಗೆ ವಿಶೇಷವಾದ ಸ್ಥಾನಮಾನವಿದೆ. ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ದೂರುಗಳು ಸಹಜ ಅದರ ಬಗ್ಗೆ ತಲೆಕೆಡಿಸಿಕೊಳ್ಳದೇ ಪ್ರಮಾಣಿಕವಾಗಿ ಕೆಲಸ ಮಾಡಿ ಉತ್ತಮ ನೌಕರರಾಗಬೇಕು. ಇಂದು ಕೇವಲ ೨೦ ಚಾಲಕರಿಗೆ ಅಷ್ಟೇ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ನೀಡಿದ್ದಾರೆ. ಮುಂದೆ ಎಲ್ಲರಿಗೂ ಕೊಡುವ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿ ಎಂದರು.
ಸAಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯೋತ್ಸವ ಖುಷಿಯಿಂದ ಆಚರಣೆ ಮಾಡಲಾಗುತ್ತದೆ. ಸಾರಿಗೆ ಸಂಸ್ಥೆಯ ಬಸ್ ಗಳ ಬಣ್ಣ ಬದಲಾಗಬೇಕು. ಸಾರ್ವಜನಿಕರ ಸ್ನೇಹಿಯಾಗಿ ಸಾರಿಗೆ ಸಂಸ್ಥೆ ಇರಬೇಕು. ಜನರೊಂದಿಗೆ ನಾವು ಎಂಬ ಭಾವನೆ ಬರಬೇಕು ಎಂದರು.
ಇದೆ ಸಂದರ್ಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ ೨೦ ಚಾಲಕರನ್ನು ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು. ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಎಸ್ಪಿ ಬಿ.ನಿಖಿಲ್, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಷಂಷೀರ್, ಕಸಾಪ ಜಿಲ್ಲಾ ಅಧ್ಯಕ್ಷ ಗೋಪಾಲಗೌಡ, ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಮುಖಂಡರಾದ ಅಂಬರೀಶ್, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಮುಂತಾದವರು ಇದ್ದರು.
ಚಿತ್ರ ೦೧ ಕೆ.ಎಲ್.ಆರ್. ೦೧ ನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಶನಿವಾರ ಆಚರಿಸಲಾದ ೭೦ ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಸಂಸದ ಎಂ.ಮಲ್ಲೇಶ್ ಬಾಬು, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು ಮುಂತಾದವರಿದ್ದರು.