ನ್ಯೂಸ್

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ / ಅವಧಿ ವಿಸ್ತರಣೆ / ಆನ್‌ಲೈನ್ ಮೂಲಕ ಸಮೀಕ್ಷೆಗೊಳ ಪಡುವಂತೆ ಜಿಲ್ಲಾಧಿಕಾರಿಗಳ ಮನವಿ

ವಿಜಯವಾಣಿ ಸುದ್ದಿಜಾಲ ಕೋಲಾರ

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಪ.ಜಾ ಜನಾಂಗದ ಸಮೀಕ್ಷೆ ಅವಧಿಯನ್ನು ಮೇ ೫ ರವರೆಗೆ ವಿಸ್ತರಿಸಲಾಗಿದ್ದು, ಮನೆ ಮನೆ ಸಮೀಕ್ಷೆಯಿಂದ ಹೊರಗುಳಿದ ಪ.ಜಾ ಕುಟುಂಬಗಳು hಣಣಠಿs://sಛಿheಜuಟeಛಿಚಿsಣesuಡಿveಥಿ.ಞಚಿಡಿಟಿಚಿಣಚಿಞಚಿ.gov.iಟಿ/seಟಜಿಜeಛಿಟಚಿಡಿಚಿಣioಟಿ ಲಿಂಕ್ ಮೂಲಕ ಸ್ವಯಂ ಘೋಷಣೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಮನವಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ, ಮನೆ ಮನೆ ಸಮೀಕ್ಷೆ ವೇಳೆಗೆ ಲಭ್ಯ ಇಲ್ಲದವರು ಹಾಗೂ ಜಿಲ್ಲೆಯಿಂದ ಬೇರೆ-ಬೇರೆ ಸ್ಥಳಗಳಿಗೆ ತೆರಳಿರುವವರು ಈ ಆನ್ಲೈನ್ ಲಿಂಕ್ ನ್ನು ಬಳಸಿಕೊಳ್ಳುವ ಮೂಲಕ ಸ್ವಯಂ ಘೋಷಣೆ ಸಲ್ಲಿಸುವಂತೆ ತಿಳಿಸಿದ್ದಾರೆ.

ನಿವೃತ್ತ ನ್ಯಾಯಾಧೀಶರಾದ ಡಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ ಸರ್ಕಾರ, ಪರಿಶಿಷ್ಟ ಜಾತಿ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಒಳಮೀಸಲಾತಿ ವರ್ಗೀಕರಣ ಮಾಡಲು ಮೇ.೫ ರಿಂದ ರಿಂದ ಮೇ.೧೭ ವರೆಗೆ ಮನೆ ಮನೆ ಸಮೀಕ್ಷೆಗೆ ಸೂಚಿಸಲಾಗಿತ್ತು.

ನಂತರ ಆಯೋಗದ ನಿರ್ದೇಶನದಂತೆ ಮನೆ ಮನೆ ಸಮೀಕ್ಷೆ ಅವಧಿಯನ್ನು ಮೇ.೨೯ ರವರೆಗೆ ವಿಸ್ತರಿಸಲಾಗಿದೆ.

ಅದರಂತೆ ಮೇ.೧೯ ರಿಂದ ಜೂ.೧ ರವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಶಿಬಿರಗಳನ್ನು ಮೇ.೩೦, ಮೇ.೩೧ ಹಾಗೂ ಜೂನ್.೧ ರಂದು ಏರ್ಪಡಿಸಲಾಗಿದೆ. ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು hಣಣಠಿs://sಛಿheಜuಟeಛಿಚಿsಣesuಡಿveಥಿ.ಞಚಿಡಿಟಿಚಿಣಚಿಞಚಿ.gov.iಟಿ/seಟಜಿಜeಛಿಟಚಿಡಿಚಿಣioಟಿ/ ಪೋರ್ಟಲ್ ಮುಖಾಂತರ ಸಲ್ಲಿಸಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್, ಆಧಾರ್ ನೋಂದಣಿ ಸಂಖ್ಯೆ ಮುಖಾಂತರ, ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯನ್ನು ಎನುಮರೇಷನ್ ಬ್ಲಾಕ್ ಎಂದು ಪರಿಗಣಿಸಲಾಗಿದೆ. ಇ.ಡಿ.ಸಿ.ಎಸ್ ನಿರ್ದೇಶನಾಲಯದಿಂದ ಅಭಿವೃದ್ಧಿ ಪಡಿಸಲಾದ ಮೋಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ ಪ್ರತಿ ಮತಕ್ಷೇತ್ರಕ್ಕೆ ಸಹಾಯಕ ಆಯುಕ್ತರ ದರ್ಜೆಯ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಚಿತ್ರ ೨೮ ಕೆ.ಎಲ್.ಆರ್. ೦೨ : ಜಿಲ್ಲಾಧಿಕಾರಿ ಎಂ.ಆರ್.ರವಿ ರವರ ಭಾವಚಿತ್ರ