ನ್ಯೂಸ್

ಜಿಲ್ಲೆಯಾದ್ಯಂತ ಮಂಗಳವಾರದಿAದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ ಆರಂಭ / ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ

ವಿಜಯವಾಣಿ ಸುದ್ದಿಜಾಲ ಕೋಲಾರ
ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: ೦೧.೦೧.೨೦೨೫ ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊAಡ ಮತದಾರರ ಹೆಸರುಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆ ಹಾಗೂ ಅರ್ಹತಾ ದಿನಾಂಕಗಳAತೆ ೧೮ ವರ್ಷ ತುಂಬುವ ಯುವ ಮತದಾರರು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದ್ದಾರೆ.

ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು ಮತ್ತು ಹೆಸರು ನೋಂದಣಿ ಮತ್ತು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಅರ್ಜಿ ನಮೂನೆ ೬ ಮತ್ತು೮ ಗಳನ್ನು ಸಲ್ಲಿಸುವಾಗ ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ. ಎಲ್ಲಾ ರೀತಿಯ ಚುಣಾವಣಾ ಸಂಬAಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ನಲ್ಲಿ ವೋಟರ್ ಹೆಲ್ಪ್ಲೈನ್ ಅಪ್ಲಿಕೇಷನ್ ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಆ೨೦ ಮಂಗಳವಾರದಿAದ ಅಕ್ಟೋಬರ್ ೧೮ ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ವಿಭಾಗ ಮತ್ತು ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ ಮತ್ತು ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳುವುದು. ನ್ಯೂನತೆಗಳ ಗುರುತಿಸುವಿಕೆ ಮತ್ತು ಅಂತಹ ನ್ಯೂನತೆಗಳನ್ನು ನಿವಾರಿಸಲು ಕಾರ್ಯತಂತ್ರ ಮತ್ತು ಕಾಲಾವಧಿಯನ್ನು ಅಂತಿಮಗೊಳಿಸುವುದು ಹಾಗೂ ನಿಯಂತ್ರಣ ಕೋಷ್ಟಕದ ನವೀಕರಣ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಚಿತ್ರ ೧೮ ಕೆ.ಎಲ್.ಆರ್. ೦೧ : ಜಿಲ್ಲಾಧಿಕಾರಿಗಳ ಭಾವಚಿತ್ರ