ವಿಜಯವಾಣಿ ಸುದ್ದಿಜಾಲ ಕೋಲಾರ
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಈ ವರ್ಷದ ಮೊದಲನೇ ರಾಷ್ಟಿçÃಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಎ.ಮಂಜುನಾಥ್ ತಿಳಿಸಿದರು.
ರಾಷ್ಟಿçÃಯ ಲೋಕ ಅದಾಲತ್ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದರಿ ರಾಷ್ಟಿçÃಯ ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಅವಕಾಶವಿದೆ. ಸದರಿ ರಾಷ್ಟಿçÃಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ್ ಎಸ್ ಹೊಸಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮುನೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.