ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಬಳ್ಳಾರಿ : ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏ.14 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ ಮಹದೇವಪ್ಪ ಘನಉಪಸ್ಥಿತಿ ಇರುವರು.

ಬಳ್ಳಾರಿ ವಲಯ ಐಜಿಪಿ ಬಿ.ಎಸ್.ಲೋಕೇಶ ಕುಮಾರ, ಡಿಸಿ ಪ್ರಶಾಂತ ಕುಮಾರ ಮಿಶ್ರಾ, ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

-------------