ವಿಜಯವಾಣಿ ಸುದ್ದಿಜಾಲ ಕೋಲಾರ
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.೧೪ ರಂದು ರಾಷ್ಟಿçÃಯ ಜನತಾ ನ್ಯಾಯಾಲಯ ನಡೆಯಲಿದ್ದು, ರಾಜೀ ಮುಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಮುಂದಾಗಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥ ತಿಳಿಸಿದರು.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ದೆಹಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು, ಕೆಜಿಎಫ್ ತಾಲ್ಲೂಕು ನ್ಯಾಯಾಲಯಗಳಲ್ಲಿ ಡಿ.೧೪ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟಿçÃಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಳೆದ ಸೆ.೧೪ ರಂದು ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆಸಲಾದ ಜನತಾ ನ್ಯಾಯಾಲಯದಲ್ಲಿ ಒಟ್ಟು ೩೪೪೭೦ ಪ್ರಕರಣಗಳ ರಾಜಿ ಮೂಲಕ ಇತ್ಯರ್ಥಗೊಂಡಿದ್ದು, ನ್ಯಾಯಾಲಯದಲ್ಲಿ ೧೨೫,೭೫,೯೧,೭೨೯ ರೂ ಪರಿಹಾರದ ಹಣ ಪಾವತಿಯಾಗಿರುತ್ತದೆ ಎಂದು ತಿಳಿಸಿದರು.
ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿಮಾಡಿಕೊಳ್ಳುವ ಕುರಿತು ತಿಳಿಸುವ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಉಭಯ ಪಕ್ಷಗಾರರು, ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸದರಿ ಪರ್ಯಾಯ ನ್ಯಾಯ ವಿತರಣೆ ಜನಮನ್ನಣೆ ಗಳಿಸಿದ್ದು, ರಾಜೀ ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ರಾಷ್ಟಿçÃಯ ಜನತಾ ನ್ಯಾಯಾಲಯದಲ್ಲಿ ಪ್ರಕರಣ ರಾಜೀ ಮಾಡಿಕೊಳ್ಳಲು ಇಚ್ಚಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.
ರಾಷ್ಟ್ರೀಯ ಜನತಾ ನ್ಯಾಯಾಲಯದ ಪ್ರಯೋಜನಗಳು:
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್ ಹೊಸಮನಿ ಹಾಜರಿದ್ದು, ರಾಷ್ಟ್ರೀಯ ಲೋಕ್ ಅದಾಲತ್‌ನ ಪ್ರಯೋಜನವನ್ನು ಸಾರ್ವಜನಿಕರು ಹಾಗೂ ಕಕ್ಷಿದಾರರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಚಿತ್ರ ೦೯ ಕೆ.ಎಲ್.ಆರ್. ೦೪ : ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.೧೪ ರಂದು ರಾಷ್ಟಿçÃಯ ಜನತಾ ನ್ಯಾಯಾಲಯ ನಡೆಯಲಿರುವ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್ ಹೊಸಮನಿ ಉಪಸ್ಥಿತರಿದ್ದರು.