ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಅಪರೇಟಿವ್ ಮ್ಯಾನೇಜ್ಮೆಂಟ್, ಮೈಸೂರು ಸಹಕಾರ ತರಬೇತಿ ಸಂಸ್ಥೆಯು ಜುಲೈ 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ಬ್ಯಾoಕ್‌ಗಳಲ್ಲಿನ ಉದ್ಯೋಗ ನೇಮಕಾತಿಗಾಗಿ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 600 ಶಿಷ್ಯವೇತನ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ 500 ಶಿಷ್ಯವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ. ದೂರ ಶಿಕ್ಷಣ ಡಿಪ್ಲೋಮೋ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯು ಸಹಕಾರ ಸಂಘ/ಸoಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಕಡ್ಡಾಯವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಸಹಕಾರ ಭವನ ಚಾಮರಾಜ ಜೋಡಿ ರಸ್ತೆ ಮೈಸೂರು ಇಲ್ಲಿ ಪಡೆದು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿಗಳು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಸಹಕಾರ ಭವನ, ಮೈಸೂರು. ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಭವನ, ಮೈಸೂರು. ಜಿಲ್ಲಾ ಸಹಕಾರ ಯೂನಿಯನ್ ನಿ., ಅಶೋಕ ನಗರ, 1 ನೇ ಕ್ರಾಸ್, ಮಂಡ್ಯ. ಜಿಲ್ಲಾ ಸಹಕಾರ ಯೂನಿಯನ್ ನಿ., ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ದೊರೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0821-2520563, ಮೊ. ನಂ: 9902189872, 9845918519, 9535250704 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.