ನ್ಯೂಸ್

ಡ್ರಗ್ಸ್ ಮಾರಾಟಗಾರರಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಮಂಗಳೂರು: ಇಲ್ಲಿನ ಕಮಿಷನರೆಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟದಲ್ಲಿ ಭಾಗಿಯಾಗಿ ಪ್ರಕರಣ ದಾಖಲಾದ 150 ಕ್ಕಿಂತಲೂ ಅಧಿಕ ಮಂದಿಯ ಪರೇಡ್ ಬುಧವಾರ ಪೊಲೀಸ್ ಮೈದಾನದಲ್ಲಿ ನಡೆಯಿತು.

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಗಾಂಜಾ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು. ಸನ್ನಡತೆ ಹೊಂದಿದರೆ ಠಾಣೆಯಲ್ಲಿ ದಾಖಲಾದ ಅಪರಾಧ ದಾಖಲಾತಿಯನ್ನು ತೆಗೆಯುವುದಾಗಿ ಭರವಸೆ ನೀಡಿದರು.

ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಡ್ರಗ್ಸ್ ಮುಕ್ತವಾಗಿಸಬೇಕು. ಮಾರಾಟಗಾರರ ಮನೆಗೆ ತೆರಳಿ ಅವರ ಚಲನ ವಲನಗಳನ್ನು ಪರಿಶೀಲನೆ ಮಾಡಬೇಕು ಎಂದರು.