ಹೊಸಹಳ್ಳಿ ಗ್ರಾಮದಲ್ಲಿರುವ ಶ್ರೀ ತ್ರಿಪುರ ಸುಂದರಿ ಅಮ್ಮನವರನ್ನು ವಿಶೇಷವಾಗಿ ಅಲಂಕರಿಲಾಗಿತ್ತು.  
ನ್ಯೂಸ್

ತ್ರಿಪುರ ಸುಂದರಿ ದೇವಾಲಯದಲ್ಲಿ ವಿಶೇಷ ಪೂಜೆ

ಮೂಗೂರು: ಸಮೀಪದ ಹೊಸಹಳ್ಳಿ ಗ್ರಾಮದಲ್ಲಿರುವ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಸೋಮವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.

ದೇಗುಲದಲ್ಲಿ ಮುಂಜಾನೆಯೇ ಅಮ್ಮನವರಿಗೆ ಅಭಿಷೇಕ, ಅರ್ಚನೆ ಮಾಡಲಾಯಿತು. ದೇವಾಲಯವನ್ನು ವಿವಿಧ ಬಗೆಯ ಹೂವಿಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

3ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಹೊಸಹಳ್ಳಿ ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ಸೇವಾ ಸಮಿತಿ ಹಾಗೂ ಗ್ರಾಮದ ಎಲ್ಲ ಸಮುದಾಯದ ಭಕ್ತರ ನೆರವಿನಿಂದ ಅನ್ನಸಂತರ್ಪಣೆ ಕಾರ್ಯ ಆಯೋಜಿಸಲಾಗಿತ್ತು. ಬಾಣಹಳ್ಳಿ ಭಿಕ್ಷದ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇವಾ ಸಮಿತಿಯ ಗೌರವಾಧ್ಯಕ್ಷ ಪುಟ್ಟಬುದ್ಧಪ್ಪ, ಉಪಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್, ಮಹೇಶ್ ಇತರರು ಇದ್ದರು.